ಹೆಬ್ರಿಯ ಅಮೃತ ಭಾರತಿ ಪಿಯು ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆಯ ಸ್ಮರಣಾರ್ಥ ರಾಷ್ಟ್ರೀಯ ಏಕತಾ ದಿವಸ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು. ಪ್ರಾಂಶುಪಾಲರು ರಾಷ್ಟ್ರೀಯ ಏಕತಾ ದಿವಸ ಪ್ರತಿಜ್ಞೆ ಬೋಧಿಸಿದರು, ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಯ ಮಹತ್ವವನ್ನು ಎತ್ತಿ ತೋರಿಸಿದ ಭಾರತದ ಏಕತೆ ಮತ್ತು ಶಕ್ತಿಗೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕೊಡುಗೆಗಳನ್ನು ಗೌರವದಿಂದ ಸ್ಮರಿಸಲಾಯಿತು.

