ಕಾರ್ಕಳ: ಸ. ಹಿ. ಪ್ರಾ. ಶಾಲೆ ಕಲಗುಪ್ಪೆಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ತಾಯಿ ಭುವನೇಶ್ವರಿಗೆ ದೀಪ ಬೆಳಗಿಸಿ, ಪುಷ್ಪಾರ್ಚನೆ ಮಾಡಿ, ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್. ಡಿ. ಎಮ್.ಸಿ ಅಧ್ಯಕ್ಷರಾದ ಗಣೇಶ್ ಸಾಲಿಯನ್ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾಯ ಮನೋಹರ್ ದಿನದ ಮಹತ್ವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರಿಗೂ ಸ್ವಾಗತ ನೀಡಿದರು.

ಮಕ್ಕಳಿಗೆ ಭಾಷಣ, ಕನ್ನಡ ಕವಿಗಳ ಹಾಡು, ಇತ್ಯಾದಿ ಕಾರ್ಯಕ್ರಮ ನಡೆಸಲಾಯಿತು. ಉಪಹಾರ ಹಾಗೂ ಸಿಹಿತಿಂಡಿ ನೀಡಲಾಯಿತು.

ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸುಜಿತ್ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುಮಿತ್ರಾ ಇಡ್ಯಾ, ಎಸ್. ಡಿ.ಎಮ್.ಸಿ ಉಪಾಧ್ಯಕ್ಷೆ ದೀಪ್ತಿ ದಿನೇಶ್ ಕಾಜರ್ ಬೈಲು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಎಸ್. ಡಿ.ಎಂ.ಸಿ ಸದಸ್ಯರು, ಹಳೆ ವಿದ್ಯಾರ್ಥಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು, ಶಿಕ್ಷಕ ವೃಂದ, ಅಡಿಗೆ ಸಿಬ್ಬಂದಿಗಳು ಹಾಜರಿದ್ದು ಸಹಕರಿಸಿದರು.
ಸಹ ಶಿಕ್ಷಕಿ ಸುನಂದ ಕಾರ್ಯಕ್ರಮ ನಿರೂಪಿಸಿದರು. ಅತಿಥಿ ಶಿಕ್ಷಕಿ ಅಶ್ವಿನಿ ಧನ್ಯವಾದವಿತ್ತರು.

