ಡಿಜಿಟಲ್ ಅರೆಸ್ಟ್ ವಂಚನೆ ತಡೆದ ಪೊಲೀಸರನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

0
47


ಮಂಗಳೂರು: ನಗರದ ಬಿಜೈನ ಹಿರಿಯ ನಾಗರಿಕ ಮಹಿಳೆಯೊಬ್ಬ ರನ್ನು ಡಿಜಿಟಲ್ ಅರೆಸ್ಟ್ ಮಾಡಿ, ಸುಮಾರು 17 ಲಕ್ಷ ರೂ. ವರ್ಗಾಯಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಹಣ ವಂಚಕರ ಪಾಲಾಗದಂತೆ ತಡೆದ ಪೊಲೀಸರನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಡಿಸಿಪಿಗಳಾದ ಮಿಥುನ್ ಹಾಗೂ ರವಿಶಂಕರ್ ಅವರನ್ನು ಸಚಿವರು ಅಭಿನಂದಿಸಿ ದರು. ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಸಚಿವರು, ಹಿರಿಯ ನಾಗರಿಕರಿಗೆ ವಂಚನೆ ಆಗುವುದು ತಪ್ಪಿತು. ಉತ್ತಮ ಕೆಲಸ ಮಾಡಿದ ನಿಮ್ಮ ಸೇವೆ ಹೀಗೆ ಮುಂದುವರಿಯಲಿ ಎಂದು ಹೇಳಿದರು.

ಈ ವೇಳೆ ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here