ನ.15: ಕಡಂದಲೆ ವಿದ್ಯಾಗಿರಿ ಶಾಲೆಯಲ್ಲಿ ‘ಪ್ರತಿಭಾ ಪುರಸ್ಕಾರ’, ವಾರ್ಷಿಕೋತ್ಸವ

0
49

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ವಿದ್ಯಾಗಿರಿ-ಕಡಂದಲೆಯಲ್ಲಿ ನವೆಂಬರ್ 15, 2025 ರಂದು ಮಕ್ಕಳ ಪ್ರತಿಭಾ ಪುರಸ್ಕಾರ ಹಾಗೂ ವಾರ್ಷಿಕೋತ್ಸವ ಸಮಾರಂಭವನ್ನು ಆಯೋಜಿಸಲಾಗಿದೆ.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಶನಿವಾರದಂದು ನಡೆಯುವ ಈ ಸಮಾರಂಭದಲ್ಲಿ ಶಾಲಾ ಮಕ್ಕಳು ಮತ್ತು ಹಳೆಯ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಮನರಂಜನಾ ಕಾರ್ಯಕ್ರಮಗಳು ಪ್ರದರ್ಶನಗೊಳ್ಳಲಿವೆ.
ಧ್ವಜಾರೋಹಣದ ಮೂಲಕ ಸಮಾರಂಭಕ್ಕೆ ಚಾಲನೆ, ಮಧ್ಯಾಹ್ನ 3 ಗಂಟೆಗೆ ಶಾಲಾ ಮಕ್ಕಳಿಂದ ಮನರಂಜನಾ ಕಾರ್ಯಕ್ರಮಗಳು ಹಾಗೂ ಶಾಲಾ ಹಳೆವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮಗಳ ಪ್ರದರ್ಶನ, 4 ಗಂಟೆಗೆ ಪ್ರತಿಭಾ ಪುರಸ್ಕಾರದ ಸಭಾ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here