ಉಡುಪಿ ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನವೆಂಬರ್ 28 ರಂದು ನಡೆಯುವ “ಲಕ್ಷ ಕಂಠ ಗೀತಾ ಪಾರಾಯಣ – ಬ್ರಹತ್ ಗೀತೋತ್ಸವ” ಕಾರ್ಯಕ್ರಮದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 03-11-2025 ರಂದು ಮಠದ ಗೀತಾಮಂದಿರದಲ್ಲಿ ನಡೆದ ಇಲಾಖಾಧಿಕಾರಿಗಳ ಹಾಗೂ ಪ್ರಮುಖರ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಸುಪ್ರಸಾದ್ ಶೆಟ್ಟಿ, ಬೆಳಪು ದೇವಿಪ್ರಸಾದ್ ಶೆಟ್ಟಿ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಪೋಲಿಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್, ಸಹಾಯಕ ಆಯುಕ್ತರಾದ ರಶ್ಮಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

