ಅಗಲಿದ ಪತ್ರಕರ್ತ ನಾಗರಾಜ್‌ರಿಗೆ ನುಡಿನಮನ

0
10

ಮಂಗಳೂರು : ಅಸೌಖ್ಯದಿಂದ ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ವೀಡಿಯೊ ಜರ್ನಲಿಸ್ಟ್ ನಾಗರಾಜ್ ಅವರಿಗೆ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಮಾಜಿ ಮೇಯರ್ ಶಶಿಧರ ಹೆಗ್ಡೆ ಮಾತನಾಡಿ ‘ಎರಡು ದಶಕದಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನಾಗರಾಜ್ ಅವರ ಕುಟುಂಬಕ್ಕೆ ಪರಿಹಾರ ಧನ ಒದಗಿಸಲು ಎಂಎಲ್‌ಸಿ ಐವನ್ ಡಿಸೋಜಾ ಅವರ ಮೂಲಕ ರಾಜ್ಯ ಸರ್ಕಾರವನ್ನು ವಿನಂತಿಸಲಾಗುವುದು ಎಂದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ , ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ವಿಜಯ ಕೋಟ್ಯಾನ್ ಪಡು ನುಡಿ ನಮನ ಸಲ್ಲಿಸಿದರು.ದಿ. ನಾಗರಾಜ್ ಕುಟುಂಬದ ಸದಸ್ಯರು, ಪತ್ರಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here