ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಸ್ಥೆಯೂ ಒಂದು ಕೇವಲ ಸಂಸ್ಥೆಯಾಗಿರದೇ ಸದಸ್ಯರೆಲ್ಲರಲ್ಲಿ ಭಾವನಾತ್ಮಕ ಕೌಟುಂಬಿಕ ಬಾಂಧವ್ಯದ ಸಂಬAಧ ನಿರ್ಮಿಸಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಸುರೇಶ್ ಅಬ್ಬನಡ್ಕ ಹೇಳಿದರು.
ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಕುಂಟಲಗುAಡಿಯಲ್ಲಿರುವ ಸಂಘದ ರಂಗಮAದಿರದಲ್ಲಿ ೨೬ನೇ ವರ್ಷದ ವರ್ಷಾಚರಣೆಯ ಪ್ರಯುಕ್ತ ಜರಗಿದ “ಬಾಂಧವ್ಯ” ವಿಶೇಷ ಕಾರ್ಯಕ್ರಮದ ಮೂಲಕ ಮಾತನಾಡಿದರು.
ಪ್ರತಿಯೊಂದು ಸಾಧನೆಯೂ ಒಂದು ಕನಸಿನಿಂದ ಹುಟ್ಟಿಕೊಳ್ಳುತ್ತದೆ. ಅಂತಹ ನೂರಾರು ಕನಸನ್ನು ಹೊತ್ತಂತಹ ನಮ್ಮ ಗ್ರಾಮೀಣ ಭಾಗದ ಯುವ ಪ್ರತಿಭೆಗಳಿಗೆ ವಿವಿಧ ಕಾರ್ಯಕ್ರಮಗಳ ಮೂಲಕ ಅವರ ಪ್ರತಿಭೆ ಸೂಕ್ತ ವೇದಿಕೆ ನಿರ್ಮಿಸಲು ನಮ್ಮ ಸಂಸ್ಥೆಯೂ ಯೋಜನೆಯನ್ನು ರೂಪಿಸುತ್ತಿದೆ ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ನಿಕಟ ಪೂರ್ವಾಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಸತೀಶ್ ಅಬ್ಬನಡ್ಕ, ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್ ವೇದಿಕೆಯಲ್ಲಿದ್ದರು.
ಈ ಸಂದರ್ಭದಲ್ಲಿ ಸಂಘದ ಪೂರ್ವಾಧ್ಯಕ್ಷರುಗಳಾದ ಆನಂದ ಪೂಜಾರಿ, ಜೊತೆ ಕಾರ್ಯದರ್ಶಿ ಮಂಜುನಾಥ ಆಚಾರ್ಯ, ಕೋಶಾಧಿಕಾರಿ ಪ್ರದೀಪ್ ಸುವರ್ಣ, ಸದಸ್ಯರಾದ ಕೀರ್ತನ್ ಬೋಳ, ಪದ್ಮಶ್ರೀ ಪೂಜಾರಿ, ಪುಷ್ಪ ಕುಲಾಲ್, ವೀಣಾ ಪೂಜಾರಿ, ಹರಿಣಿ ಪೂಜಾರಿ, ವೀಣಾ ಆಚಾರ್ಯ, ಹರಿಣಾಕ್ಷಿ ಪೂಜಾರಿ, ಯೋಗೀಶ್ ಆಚಾರ್ಯ, ಶ್ರೀಕಾಂತ್ ಆಚಾರ್ಯ, ಸುಭಾಸ್ ಕೆಮ್ಮಣ್ಣು, ಕಿರಣ್ ಬೋಳ ಮೊದಲಾದವರಿದ್ದರು.
Home Uncategorized “ಬಾಂಧವ್ಯ” ವಿಶೇಷ ಕಾರ್ಯಕ್ರಮ: ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಕೇವಲ ಸಂಸ್ಥೆಯಾಗಿರದೇ ಸದಸ್ಯರೆಲ್ಲರಲ್ಲಿ ಭಾವನಾತ್ಮಕ ಬಾಂಧವ್ಯ ನಿರ್ಮಿಸಿದೆ...

