ಭಾರತದಲ್ಲಿ ಮತ್ತೊಂದು ಉಗ್ರರ ದಾಳಿಯ ಎಚ್ಚರಿಕೆ; ಜಮ್ಮು ಕಾಶ್ಮೀರದಲ್ಲಿ ಹೆಚ್ಚಿದ ಭದ್ರತೆ

0
53

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಆಪರೇಷನ್ ಸಿಂಧೂರ್‌ ಕಾರ್ಯಾಚರಣೆ ನಡೆಸಲಾಗಿತ್ತು. ಅದಾಗಿ 6 ತಿಂಗಳಾಗಿವೆ. ಈಗ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳು ಅದರಲ್ಲೂ ವಿಶೇಷವಾಗಿ ಲಷ್ಕರ್-ಎ-ತೈಬಾ (ಎಲ್‌ಇಟಿ) ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ಹೊಸ ಸಂಘಟಿತ ದಾಳಿಗಳಿಗೆ ಸಿದ್ಧತೆ ನಡೆಸಿವೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಬಗ್ಗೆ ಭಾರತದ ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರವನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಉಗ್ರರ ದಾಳಿಯ ಆತಂಕವನ್ನು ಹೆಚ್ಚಿಸಿದೆ. ಪಹಲ್ಗಾಮ್​ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತವು ಭಯೋತ್ಪಾದನಾ ನಿಗ್ರಹ ಅಭಿಯಾನವನ್ನು ಪ್ರಾರಂಭಿಸಿದ 6 ತಿಂಗಳ ನಂತರ ಪಾಕ್ ಮೂಲದ ಉಗ್ರ ಸಂಘಟನೆಗಳು ಮತ್ತೊಮ್ಮೆ ಭಾರತದ ಮೇಲೆ ದಾಳಿ ನಡೆಸಲು ಪ್ಲಾನ್ ಮಾಡುತ್ತಿವೆ ಎಂಬ ಮಾಹಿತಿ ಹೊರಬಿದ್ದಿದೆ. ಪಾಕಿಸ್ತಾನದ ವಿಶೇಷ ಸೇವಾ ಗುಂಪು ಮತ್ತು ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ ಕಾರ್ಯಕರ್ತರ ಸಹಾಯದಿಂದ ಎಲ್​ಇಟಿ ಮತ್ತು ಜೆಇಎಂ ಘಟಕಗಳು ಗಡಿ ನಿಯಂತ್ರಣ ರೇಖೆಯ (ಎಲ್​ಒಸಿ) ಬಳಿ ಒಳನುಸುಳುವಿಕೆ ಮಾರ್ಗಗಳ ಮೂಲಕ ಜಮ್ಮು ಮತ್ತು ಕಾಶ್ಮೀರವನ್ನು ಪ್ರವೇಶಿಸಿತ್ತು ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಉನ್ನತ ಗುಪ್ತಚರ ಮೂಲಗಳ ಪ್ರಕಾರ, ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‌ಐ) ಮತ್ತು ಎಸ್‌ಎಸ್‌ಜಿ ಈ ದಾಳಿಯ ಪ್ರಯತ್ನವನ್ನು ಸಕ್ರಿಯವಾಗಿ ಬೆಂಬಲಿಸುತ್ತಿವೆ ಎನ್ನಲಾಗಿದೆ. ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಳಗೆ (ಪಿಒಕೆ) ಪಾಕಿಸ್ತಾನದ ಗಡಿ ಕ್ರಿಯಾ ತಂಡದ (ಬಿಎಟಿ) ಹೊಸ ಚಲನವಲನಗಳು ಪತ್ತೆಯಾಗಿವೆ ಎಂದು ಭದ್ರತಾ ಅಧಿಕಾರಿಗಳು ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here