ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ

0
124

ಬೆಂಗಳೂರು: ಕಳೆದ 10-12 ದಿನಗಳಿಂದ 1150 ರೂಗಳಷ್ಟು ಇಳಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು ಸೋಮವಾರ ಒಂದೇ ದಿನ 110 ರೂ ಹೆಚ್ಚಿದೆ. ಬೆಳ್ಳಿ ಬೆಲೆಯೂ ಇಂದು ಹೈಜಂಪ್ ಆಗಿದೆ. 152.50 ರೂ ಇದ್ದ ಒಂದು ಗ್ರಾಮ್ ಬೆಳ್ಳಿ ಬೆಲೆ ಇವತ್ತು 155 ರೂಗೆ ಏರಿದೆ. ಭಾರತದಲ್ಲಿ ಮಾತ್ರ ಇಂದು ಈ ಏರಿಕೆ ಕಂಡು ಬಂದಿರುವುದು. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,12,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,23,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,12,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 15,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,700 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ ಇಂದು(ನ.10)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,322 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,295 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 9,242 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 155 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (1 ಗ್ರಾಮ್​ಗೆ)
  • ಬೆಂಗಳೂರು: 155 ರೂ
  • ಚೆನ್ನೈ: 167 ರೂ
  • ಮುಂಬೈ: 155 ರೂ
  • ದೆಹಲಿ: 155 ರೂ
  • ಕೋಲ್ಕತಾ: 155 ರೂ
  • ಕೇರಳ: 167 ರೂ
  • ಅಹ್ಮದಾಬಾದ್: 155 ರೂ
  • ಜೈಪುರ್: 155 ರೂ
  • ಲಕ್ನೋ: 155 ರೂ
  • ಭುವನೇಶ್ವರ್: 167 ರೂ
  • ಪುಣೆ: 155

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

LEAVE A REPLY

Please enter your comment!
Please enter your name here