ಬಲೆ ತುಳು ಓದುಗ’ ; ನ.12 ರಂದು ಅಕಾಡೆಮಿಗೆ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳ ಭೇಟಿ

0
66

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ವಿದ್ಯಾರ್ಥಿ, ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸಲು ಹಮ್ಮಿಕೊಂಡಿರುವ ‘ಅಕಾಡೆಮಿಡ್ ಒಂಜಿ ದಿನ ; ಬಲೆ ತುಳು ಓದುಗ’ ಅಭಿಯಾನದ ಹನ್ನೆರಡನೇ ಕಾರ್ಯಕ್ರಮ ನ.12 ರಂದು ನಡೆಯಲಿದೆ.
ಬುಧವಾರದಂದು ಮಂಗಳೂರಿನ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ 30 ವಿದ್ಯಾರ್ಥಿಗಳು ಉರ್ವಾಸ್ಟೋರ್ ನಲ್ಲಿರುವ ತುಳು ಭವನದ ಗ್ರಂಥಾಲಯಕ್ಕೆ ಭೇಟಿ ನೀಡಿ ಅಧ್ಯಯನ ಹಾಗೂ ಸಂವಾದ ನಡೆಸುವರು.
ಕಾರ್ಯಕ್ರಮವನ್ನು ಬೆಳಿಗ್ಗೆ 10.00 ಗಂಟೆಗೆ ಹಿರಿಯ ಕವಿ ಮತ್ತುವಿಶ್ರಾಂತ ಪತ್ರಕರ್ತರು, ತುಳು ಅಕಾಡೆಮಿಯ ಮಾಜಿ ಸದಸ್ಯರಾದ ಚಿದಂಬರ ಬೈಕಂಪಾಡಿ ಅವರು ಉದ್ಘಾಟಿಸಿ,ದಿಕ್ಸೂಚಿ ಮಾತನ್ನಾಡುವರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶ್ರೀ ಗೋಕರ್ಣನಾಥೇಶ್ವರ ಶಿಕ್ಷಣ ಸಂಸ್ಥೆಯ ಸಂಚಾಲಕ ವಸಂತ ಕಾರಂದೂರು ಭಾಗವಹಿಸುವರು. ಕಾಲೇಜಿನ ಪ್ರಾಂಶುಪಾಲ ಡಾ. ಜಯಪ್ರಕಾಶ್, ಸಂಸ್ಥೆಯ ಆಡಳಿತಾಧಿಕಾರಿ ನಾಗೇಶ್ ಕರ್ಕೇರ ಉಪಸ್ಥಿತರಿರುವರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸುವರು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here