ರೋಟರಿ ಕ್ಲಬ್ ಕಾರ್ಕಳ ಇದರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ರೋಟರಿ ಬಾಲ ಭವನದಲ್ಲಿ ವಿಶೇಷ ರೀತಿಯಲ್ಲಿ ಆಚರಿಸಲಾಯಿತು.
ರೋಟರಿ ಕ್ಲಬ್ಬಿನ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಲಕ್ಷ್ಮಣ ಡಿ. ನಿವೃತ್ತ ಶಿಕ್ಷಕರು ಕನ್ನಡ ರಾಜ್ಯೋತ್ಸವದ ಬಗ್ಗೆ ಮಾತನಾಡಿ ಹಲವು ಕನ್ನಡ ಗೀತೆಗಳನ್ನು ಹಾಡುವ ಮೂಲಕ ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸಿದರು.
ಇದೇ ಸಂದರ್ಭದಲ್ಲಿ ಮಮತಾ ಶೆಟ್ಟಿ ಹಿರ್ಗಾನ ಇವರಿಗೆ ರಾಜ್ಯೋತ್ಸವದ ಪ್ರಯುಕ್ತ ಕ್ಲಬ್ಬಿನ ವತಿಯಿಂದ ಹೊಲಿಗೆ ಯಂತ್ರ ನೀಡಲಾಯಿತು. ಹಿರಿಯ ಸದಸ್ಯರಾದ ದಾನಿ ತುಕಾರಾಮ ನಾಯಕ್ ಮತ್ತು ಜನಾರ್ಧನ ಇಡ್ಯಾ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.
ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಸ್ವಾಗತಿಸಿ ನಿರೂಪಿಸಿದರು ಕಾರ್ಯದರ್ಶಿ ಚೇತನ್ ನಾಯಕ್ ವಂದಿಸಿದರು.

