ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ ಪ್ರತಿ ವರ್ಷದಂತೆ ಕಳೆದ ೩೫ ವರ್ಷಗಳಿಂದ ನಡೆಯುತ್ತಿರುವ ಕಲೆ, ಸಾಹಿತ್ಯ, ಸಂಗೀತ, ಶಿಕ್ಷಣಗಳ ಸಾಂಸ್ಕೃತಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದ್ದು 70ನೇ ವರ್ಷದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ವಿವಿಧ ಜಿಲ್ಲೆಗಳ ಪ್ರತಿಭಾವಂತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಸಾಧಕರಿಗೆ ನವಂಬರ್ ೨೩ ರಂದು ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ನಗರದ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ “ಕರ್ನಾಟಕ ಸಿರಿಗನ್ನಡ ಸಿರಿ” ರಾಜ್ಯ ಪ್ರಶಸ್ತಿಯನ್ನು ಭವ್ಯ, ದಿವ್ಯ ವೇದಿಕೆ ಯಲ್ಲಿ ಸನ್ಮಾನಿಸಿ ಗೌರವಿಸ ಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ಶಿವಮೊಗ್ಗದ ಖ್ಯಾತ ಯಕ್ಷಗಾನ ಕಲಾವಿದೆ, ಸುಮುಖ ಯಕ್ಷಗಾನ ಕಲಾಕೇಂದ್ರದ ಅಧ್ಯಕ್ಷರಾದ ಶ್ರೀಮತಿ ಕಿರಣ್ ರವಿ.ಪೈ ನೆರವೇರಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕಲಾಕುಂಚದ ಅಧ್ಯಕ್ಷರಾದ ಕೆ.ಹೆಚ್. ಮಂಜುನಾಥ್ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಾವಣಗೆರೆಯ ಖ್ಯಾತ ಬರಹಗಾರರು ವೈದ್ಯಕೀಯ ಕ್ಷೇತ್ರದ ಸಾಧಕರಾದ ಡಾ| ಶಶಿಕಲಾ ಕೃಷ್ಣಮೂರ್ತಿ, ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಶೈಕ್ಷಣಿಕ ಸಾಧಕಿ ಖ್ಯಾತ ಚಿತ್ರಕಾವಿದರಾದ ಕುಮಾರಿ ನವ್ಯ, ಮನೋಹರ್ ಪೈ, ಬೆಂಗಳೂರಿನ ಖ್ಯಾತ ಸಂಗೀತ ಸಾಧಕಿ, ಸಾಹಿತಿ, ಕವಯತ್ರಿ ಶ್ರೀಮತಿ ನವೀನ ರಾಯ್ಕರ್ ಆಗಮಿಸಲಿದ್ದಾರೆ. ಸಮಾರಂಭದ ವೇದಿಕೆಯಲ್ಲಿ ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ಗೌರವ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಗೌರವ ಉಪಸ್ಥಿತರಿರುತ್ತಾರೆ. ಈ ೭೦ನೇ ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಮನಸ್ಸುಗಳು ಅಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕಾಗಿ ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.

