ಮೂಡುಬಿದಿರೆ : ಹಿಂದೂ ಜನ ಜಾಗೃತಿ ಸಮಿತಿಯ ವತಿಯಿಂದ ಮೂಡುಬಿದಿರೆಯ ಅಚ್ಚರಕಟ್ಟೆಯಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 32 ವಿದ್ಯಾರ್ಥಿಗಳಿಗೆ ಉಚಿತವಾಗಿ ಸಂಸ್ಕಾರ ನೋಟ್ ಪುಸ್ತಕಗಳನ್ನು ವಿತರಣೆ ಮಾಡುವ ಕಾರ್ಯಕ್ರಮವನ್ನು ಮಾಡಲಾಯಿತು.
’ಸಂಸ್ಕಾರ ವಹಿ’ಯ ಮುಖಪುಟ ಹಾಗೂ ಹಿಂಬದಿಯ ಪುಟದಲ್ಲಿ ಸ್ವಾತಂತ್ರಕ್ಕಾಗಿ ಹೋರಾಡಿದ ರಾಷ್ಟ್ರ ಪುರುಷರ, ಒಳ್ಳೆಯ ರಾಜ್ಯಾಡಳಿತ ನಡೆಸಿ ಪ್ರಜೆಗಳ ಹಿತಕ್ಕಾಗಿಯೇ ದುಡಿದ ರಾಜ-ಮಹಾರಾಜರ ಆದರ್ಶಗಳು, ಒಳಗಿನ ಪುಟದಲ್ಲಿ ಸುಸಂಸ್ಕಾರ, ನೈತಿಕತೆಯ ಬಗ್ಗೆ ವಿಷಯ ಒಳಗೊಂಡಿರುತ್ತದೆ. ಅದನ್ನು ಓದಿ ತಿಳಿದುಕೊಂಡು ಜೀವನದಲ್ಲಿ ಆಳವಡಿಸಿಕೊಂಡರೆ ಮಕ್ಕಳು ’ಆದರ್ಶ ವಿದ್ಯಾರ್ಥಿ’ಯಾಗಿ ರೂಪುಗೊಳ್ಳುವುದರಲ್ಲಿ ಸಂದೇಹವಿಲ್ಲ, ಇದರಿಂದ ಮುಂದೆ ಅವರು ’ಆದರ್ಶ ರಾಷ್ಟ್ರ’ ಕಟ್ಟಲು ಸಾಧ್ಯವಾಗುವುದು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯಕರ್ತರಾದ ಸೌ. ನಂದಿತಾ ಕಾಮತ್, ಸೌ.ಶ್ಯಾಮಲಾ ಸುರೇಶ್ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಸೌ. ಸುವರ್ಣಿ ಪೈ, ಶಾಲಾ ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

