ಮೂಡುಬಿದಿರೆ: 19-11-2025 ರಂದು ಮೂಡುಬಿದಿರೆ ಮೈನ್ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆ ಉತ್ತಮ ಸಾಧನೆ ಮಾಡಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು 12 ಪ್ರಥಮ ಸ್ಥಾನ, 8 ದ್ವಿತೀಯ ಸ್ಥಾನ ಮತ್ತು 16 ತೃತೀಯ ಸ್ಥಾನಗಳನ್ನು ಪಡೆದು ಶಾಲೆಗೆ ಗೌರವ ತಂದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ದಿಗಂಬರ ಜೈನ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯಿನಿಯವರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಮತ್ತು ಪೋಷಕರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

