ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಗ್ರಾಮದ ಅಡ್ಕ ನಿವಾಸಿ ಬಿಜೆಪಿ ಬೂತ್ 18ರ ಕಾರ್ಯದರ್ಶಿ ರಮೇಶ್ ಗೌಡರವರು ತಾನು ಕೆಲಸ ಮಾಡುವ ಸಂದರ್ಭದಲ್ಲಿ ಬಿದ್ದು ಗಾಯಗೊಂಡಿದ್ದು. ಇಂದು ಅವರ ಮನೆಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ನೀಡಿ ಆರೋಗ್ಯ ಕ್ಷೇಮ ವಿಚಾರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಮಲವಂತಿಗೆ ಶಕ್ತಿಕೇಂದ್ರ ಅಧ್ಯಕ್ಷರಾದ ಮದುಸೂಧನ್, ಮಿತ್ತಬಾಗಿಲು ಶಕ್ತಿಕೇಂದ್ರ ಅಧ್ಯಕ್ಷರಾದ ಸಚಿನ್ ಗೌಡ ಜೊತೆಗಿದ್ದರು.

