ಮುಲ್ಕಿ: ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಇಬ್ಬರು ಪವಾಡ ಸದೃಶ ಪಾರು

0
184


ಮುಲ್ಕಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣದ ವಿಜಯ ಸನ್ನಿಧಿ ಜಂಕ್ಷನ್ ಬಳಿ ಕಾರು ಚಾಲಕಿ ಯ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಕಾರಿನಲ್ಲಿದ್ದ ಚಾಲಕಿ ಬೆಂಗಳೂರು ನಿವಾಸಿ ಶಿಲ್ಪಾ ಕರುಣಾಕರ್ ಸಹಿತ ಮಹಿಳೆಯೊಬ್ಬರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪವಾಡ ಸದೃಶ ಪಾರಾಗಿದ್ದಾರೆ.
ಚಾಲಕಿ ಶಿಲ್ಪರವರು ಪಡುಬಿದ್ರೆ ಕಡೆಯಿಂದ ತಮ್ಮ ಮಾರುತಿ ಸುಜುಕಿ ಎಸ್ ಪ್ರೆಸ್ಸೊ ಕಾರಿನಲ್ಲಿ ಶಿಬರೂರು ಕಡೆಗೆ ಹೋಗುತ್ತಿದ್ದು ಮುಲ್ಕಿ ವಿಜಯ ಸನ್ನಿಧಿ ಹೆದ್ದಾರಿ ಬಸ್ ನಿಲ್ದಾಣ ತಲುಪುತ್ತಿದ್ದಂತೆ ಮೊಬೈಲ್ ನಲ್ಲಿ ಗೂಗಲ್ ಮ್ಯಾಪ್ ನೋಡುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಹೆದ್ದಾರಿ ಜಂಕ್ಷನ್ ಬಳಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಅಪಘಾತದ ರಭಸಕ್ಕೆ ಕಾರಿನ ಬಾಗಿಲು ಕಿತ್ತು ಹೋಗಿದ್ದು ಡಿವೈಡರ್ ಬಳಿಯ ಸಿಗ್ನಲ್ ಕಂಬಕ್ಕೆ ಸಿಲುಕಿಕೊಂಡಿದೆ.
ಅಪಘಾತಕ್ಕೀಡಾದ ಕಾರಿನಲ್ಲಿ ಸಿಲುಕಿಕೊಂಡ ಮಹಿಳೆಯರನ್ನು ಸ್ಥಳೀಯರು ಧಾವಿಸಿ ರಕ್ಷಿಸಿದ್ದಾರೆ.
ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಹೆದ್ದಾರಿ ಇಲಾಖೆಯ ಸಿಬ್ಬಂದಿ ಟೋಯಿಂಗ್ ವಾಹನದ ಮೂಲಕ ಕಾರನ್ನು ತೆರವುಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here