ವರದಿ ರಾಯಿ ರಾಜ ಕುಮಾರ
ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆರೋಗ್ಯದ ವಿಷಯದಲ್ಲಿ ಸಂಪೂರ್ಣ ಮಾಹಿತಿಯುಕ್ತವಾದಂತಹ ಶಿಬಿರವನ್ನು ಮೂಡುಬಿದಿರೆ ಸಮಾಜಮಂದಿರದಲ್ಲಿ ಆಯೋಜಿಸಲಾಗಿತ್ತು. ಶಿಬಿರದ ಉದ್ಘಾಟನೆಯ ತರುವಾಯ ಕಾರ್ಮಿಕರಿಗೆ ದೊರಕುವ ವಿವಿಧ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಸ್ಥಳದಲ್ಲಿಯೇ ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ಕೈದು ಸೂಕ್ತವಾದಂತಹ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ತಿಳಿಸಲಾಯಿತು.

ಈ ಸಂದರ್ಭದಲ್ಲಿ ಸಂಚಾರಿ ಆರೋಗ್ಯ ಘಟಕ ಮತ್ತು ಇತರ ಕಾರ್ಮಿಕ ಇಲಾಖೆಯ ಎಲ್ಲಾ ಆರೋಗ್ಯ ಸಂಬಂಧಿ ಘಟಕಗಳು ಹಾಜರಿದ್ದು ಸಹಕರಿಸಿದವು. ಇಲಾಖೆಯ ವಿವಿಧ ಅಧಿಕಾರಿಗಳು ಈ ಸಂದರ್ಭ ಹಾಜರಿದ್ದು ಕಾರ್ಯಕ್ರಮವನ್ನು ಸಂಘಟಿಸಿದ್ದರು.

