ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಪದ್ಮಭೂಷಣ ರಾಜಶ್ರೀ ಡಾ ಡಿ ವೀರೇಂದ್ರ ಹೆಗ್ಗಡೆಯವರ 78. ನೇ. ಜನ್ಮ ದಿನದ ಅಂಗವಾಗಿ ಮಾಣಿ ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರು ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಏರ್ಪಡಿಸಿದ್ದರು. ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಕಾಶ್ ಭಟ್, ಜನಜಾಗೃತಿ ವಲಯಾಧ್ಯಕ್ಷ ರಾದ ರಾಜಾರಾಮ ಶೆಟ್ಟಿ ಕೋಲ್ಪೆ, ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತರು ಭಾಗವಹಿಸಿದ್ದರು.


