ದಾವಣಗೆರೆ: ಜಯದೇವ ವೃತ್ತದ ಹತ್ತಿರ ಇರುವ ಜಯದೇವ ವೃತ್ತ ಉಪ ಅಂಚೆ ಇಲಾಖೆಯ ಸಭಾಂಗಣದಲ್ಲಿ ನವಂಬರ್ 29 ರಂದು ಶನಿವಾರ ಸಂಜೆ 4 ಗಂಟೆಗೆ 70ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭಹಮ್ಮಿಕೊಳ್ಳಲಾಗಿದೆ. ಸಮಾರಂಭದ ಉದ್ಘಾಟನೆಯನ್ನು ದಾವಣಗೆರೆ ಜಿಲ್ಲೆಯ ಅಂಚೆ ಇಲಾಖೆಯ ಜಿಲ್ಲಾ ಅಧೀಕ್ಷಕರಾದ ಚಂದ್ರಶೇಖರ್ ನೆರವೇರಿಸ ಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ನಗರದ ಜಯದೇವ ವೃತ್ತ ಉಪ ಅಂಚೆ ಇಲಾಖೆಯ ಉಪ ಅಂಚೆ ಇಲಾಖೆಯ ಅಂಚೆ ಪಾಲಕರು ಸಿ.ವಿ.ಶಿವರಾಮ ಶರ್ಮ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಾವಣಗೆರೆ ಉಪ ಅಂಚೆ ಇಲಾಖೆಯ ಅಧೀಕ್ಷಕರಾದ ಕೆ.ಎಂ.ನರೇಂದ್ರ ನಾಯಕ್, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ, ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಅಧ್ಯಕ್ಷರಾದ ಶ್ರೀಮತಿ ಲಲಿತಾ ಕಲ್ಲೇಶ್, ಕಲಾಕುಂಚ ಎಂ.ಸಿ.ಸಿ.ಶಾಖೆಯ ಅಧ್ಯಕ್ಷರಾದ ಶ್ರೀಮತಿ ಪ್ರಭಾ ರವೀಂದ್ರ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ ಆಗಮಿಸಲಿದ್ದಾರೆ. ಈ ಸಮಾರಂಭದಲ್ಲಿ ಅಂಚೆ ಇಲಾಖೆಯ ಸಿಬ್ಬಂದಿಗಳಿಗೆ ಹಾಗೂ ಹಿರಿಯರಿಗೆ ಕಿರಿಯರಿಗೆ ಮತ್ತು ಮಕ್ಕಳಿಗೆ ಉಚಿತವಾಗಿ ಆಟೋಟಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ. ಅಂಚೆ ಇಲಾಖೆಯ ಸರ್ವ ಸದಸ್ಯರು, ಅಂಚೆ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮಾರಂಭಯಶಸ್ವಿಗೊಳಿಸಬೇಕಾಗಿ ಅಂಚೆ ಇಲಾಖೆಯವರು ವಿನಂತಿಸಿದ್ದಾರೆ.

