ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹೆಬ್ರಿ ತಾಲೂಕು ಇವರ ನೇತೃತ್ವದಲ್ಲಿ ಕ್ರೀಡಾ ಭಾರತಿ ಹಾಗೂ ಅಮೃತ ಭಾರತಿ ವಿದ್ಯಾಸಂಸ್ಥೆಗಳ ಸಹಯೋಗದೊಂದಿಗೆ ದಿನಾಂಕ 30 11 2025 ರಂದು ಹೆಬ್ರಿ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ,ಉಡುಪಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್(ರಿ) ಇವರ ಮಾರ್ಗದರ್ಶನದಲ್ಲಿ ನಡೆಯಲಿರುವ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಚಾಂಪಿಯನ್ ಶಿಪ್ ಟ್ರೋಫಿ 2025 ರ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಅಮೃತ ಭಾರತಿಯ ಅನ್ನಪೂರ್ಣ ಸಭಾಂಗಣದಲ್ಲಿ ನಡೆಯಿತು. ಅಮೃತ ಭಾರತಿ ಟ್ರಸ್ಟ್.ನ ಕಾರ್ಯದರ್ಶಿ, ಕ್ರೀಡಾ ಭಾರತಿಯ ಗೌರವಾಧ್ಯಕ್ಷರಾದ ಗುರುದಾಸ್ ಶೆಣೈ , ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನ ಮಾಜಿ ಉಪಾಧ್ಯಕ್ಷರಾದ ರಾಜೇಂದ್ರ ಸುವರ್ಣ, ಉಡುಪಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಷಿಯೇಷನ್ ನ ಸಂಚಾಲಕರಾದ ಆರೂರು ತಿಮ್ಮಪ್ಪ ಶೆಟ್ಟಿ , ಕಾರ್ಯದರ್ಶಿ ಪ್ರಾಣೇಶ್ ಎಸ್ ಕೆ , ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷರಾದ ಬಿ ಹರ್ಷ ಶೆಟ್ಟಿ ಸಂಚಾಲಕರಾದ ಸೀತಾನದಿ ವಿಠಲ್ ಶೆಟ್ಟಿ , ಕಾರ್ಯದರ್ಶಿ ವಿಜಯ್ ಕುಮಾರ್ ಶೆಟ್ಟಿ, ಖಜಾಂಚಿ ರಾಜಾರಾಮ್ ಶೆಟ್ಟಿ, ಉಡುಪಿ ಜಿಲ್ಲಾ ರೆಪ್ಲಿ ಬೋರ್ಡ್ ಚೇರ್ಮನ್ ಶಶಿಧರ್, ಹೆಬ್ರಿ ತಾಲೂಕು ರೆಫ್ರಿ ಬೋರ್ಡ್ ಚೇರ್ಮನ್ ಭರತ್ ಮುನಿಯಾಲ್ ಮತ್ತು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನ ಪದಾಧಿಕಾರಿಗಳು ಊರಿನ ಹಿರಿಯರು ಕ್ರೀಡಾಭಿಮಾನಿಗಳು ದೈಹಿಕ ಶಿಕ್ಷಣ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಜಿಲ್ಲಾ ಸಂಚಾಲಕರಾದ ಆರೂರು ತಿಮ್ಮಪ್ಪ ಶೆಟ್ಟಿಯವರು ಮಾತನಾಡಿ, ಕ್ರೀಡಾಳುಗಳು ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು . ಕ್ಲಪ್ತ ಸಮಯದಲ್ಲಿ ಪಂದ್ಯಾಟದ ಸ್ಥಳದಲ್ಲಿ ಹಾಜರಿದ್ದು , ಸಂಘಟಕರಿಗೆ ಪ್ರೋತ್ಸಾಹ ನೀಡಿದಲ್ಲಿ ಹೆಚ್ಚು ಹೆಚ್ಚು ಕ್ರೀಡಾಕೂಟಗಳನ್ನು ಸಂಘಟಿಸಲು ಸಾಧ್ಯವಾಗುತ್ತದೆ ಎಂದರು. ಗುರುದಾಸ್ ಶೆಣೈಯವರು ಮಾತನಾಡಿ ಅಮೃತ ಭಾರತಿ ಕ್ರೀಡೆಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿದೆ ಈ ಬಾರಿ ಕಬಡ್ಡಿ ಪಂದ್ಯಾಟ ನಮ್ಮ ಸಂಸ್ಥೆಯಲ್ಲಿ ಆಯೋಜಿಸಿದ್ದು ಸಂತಸ ತಂದಿದೆ ಸಂಸ್ಥೆಯ ಕಡೆಯಿಂದ ಸಂಪೂರ್ಣ ಸಹಕಾರವನ್ನು ನೀಡುತ್ತೇವೆ ಎಂದರು. ಅಧ್ಯಕ್ಷರಾದ ಬಿ.ಹರ್ಷ ಶೆಟ್ಟಿ ಅವರು ಸ್ವಾಗತಿಸಿದರು. ಸೀತಾನದಿ ವಿಠಲಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು ವಿಜಯ್ ಕುಮಾರ್ ಶೆಟ್ಟಿ ನಿರೂಪಿಸಿ ವಂದಿಸಿದರು.
Home Uncategorized ಉಡುಪಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್: ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಚಾಂಪಿಯನ್ ಶಿಪ್...

