ಮಂಡ್ಯ, : ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ಗ್ರಾಮದಲ್ಲಿ ಮಂಗಳಮುಖಿಯರ ನಡುವೆ ಬಿಗ್ ಫೈಟ್ ನಡೆದಿದೆ. ಹಣ ಹಂಚಿಕೆ ವಿಚಾರಕ್ಕೆ ಮೈಸೂರು ಮತ್ತು ಮಂಡ್ಯದ ಮಂಗಳಮುಖಿಯರ ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಎರಡು ಕಡೆಯವರು ಸಾರ್ವಜನಿಕ ಸ್ಥಳದಲ್ಲಿ ಸಿಕ್ಕ ಸಿಕ್ಕ ವಸ್ತುಗಳಿಂದ ಮನಬಂದಂತೆ ಬಡಿದಾಡಿಕೊಂಡಿದ್ದಾರೆ. ಇವರ ಗಲಾಟೆಯಿಂದ ಸಾರ್ವಜನಿಕ ವಸ್ತುಗಳಿಗೆ ಹಾನಿಯಾಗಿದೆ. ಜತೆಗೆ ಅಲ್ಲಿನ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಪ್ರತಿದಿನ ಈ ಮಂಗಳಮುಖಿಯರ ಜಗಳ ನಡೆಯುತ್ತಿರುತ್ತದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇದೀಗ ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ದೂರು ಕೂಡ ನೀಡಲಾಗಿದೆ.

