ಡಿಸೆಂಬರ್ 7 ರಂದು ಉಚಿತ ಶಿಕ್ಷಣಕ್ಕಾಗಿ ಪ್ರವೇಶ ಪರೀಕ್ಷೆ
ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು ಹಾಗೂ ಹಾಸನಜಿಲ್ಲೆಯ 8 ವಿವಿಧ ಪರೀಕ್ಷಾ ಕೇಂದ್ರದಲ್ಲಿ ಏಕಕಾಲದಲ್ಲಿ ಪರೀಕ್ಷೆ
ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಖಚಿತ ಉಚಿತ ಶಿಕ್ಷಣ
ವಿಜ್ಞಾನ, ವಾಣಿಜ್ಯ, ಕಲಾ ವಿಭಾಗ ಸೇರಬಯಸುವ ವಿದ್ಯಾರ್ಥಿಗಳಿಗೆ ಪರೀಕ್ಷೆ
ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಮೊದಲ ಸಂಸ್ಥೆ, ಸುಮಾರು ಆರು ದಶಕಗಳ ಸಮೃದ್ಧ ಶೈಕ್ಷಣಿಕ ಪರಂಪರೆಯುಳ್ಳಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜು ಕೇವಲ ನಗರ ಪ್ರದೇಶ ಮಾತ್ರವಲ್ಲದೇ ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದೆ.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿವಿಧ ಶೈಕ್ಷಣಿಕ ಸೌಲಭ್ಯವನ್ನು ಒದಗಿಸುತ್ತಾ ಬಂದಿರುವ ನಮ್ಮ ಸಂಸ್ಥೆಯು ಮೇಧಾ – 2026ಎಂಬ ಶೀರ್ಷಿಕೆಯೊಂದಿಗೆ ಉಚಿತ ಶಿಕ್ಷಣ ಯೋಜನೆಯನ್ನು ಪರಿಚಯಿಸಿದ್ದು, ಪರೀಕ್ಷೆಯೊಂದನ್ನು ನಡೆಸಿ ಅದರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶೇ. 100 ವಿದ್ಯಾರ್ಥಿವೇತನ ಅರ್ಥಾತ್ ಉಚಿತ ಶಿಕ್ಷಣ ದೊರೆಯಲಿದೆ. ಕಳೆದ ಶೈಕ್ಷಣಿಕ ವರ್ಷದಿಂದ ಆರಂಭಗೊAಡ ಈ ಯೋಜನೆಯಲಿ,್ಲ ಕನ್ನಡ ಹಾಗೂ ಆಂಗ್ಲ ಮಾಧ್ಯಮದಲ್ಲಿ ಪರೀಕ್ಷೆ ನಡೆಯಲಿದ್ದು,9 ಹಾಗೂ 10 ನೇ ತರಗತಿಗೆ ಸಂಬAಧಪಟ್ಟ ಗಣಿತ, ವಿಜ್ಞಾನ ಹಾಗೂ ಸಾಮಾನ್ಯ ಜ್ಞಾನದ ಆಧಾರದ ಮೇಲೆ 120 ನಿಮಿಷಗಳ ಪರೀಕ್ಷೆ ನಡೆಯಲಿದ್ದು, ಕಲಾ ವಿಭಾಗ, ವಿಜ್ಞಾನ ವಿಭಾಗ ಹಾಗೂ ವಾಣಿಜ್ಯ ವಿಭಾಗಗಳಿಗೆ ಸೇರಬಯಸುವ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ.
2025 ರ ಡಿಸೆಂಬರ್ 7 ರಂದು ದಕ್ಷಿಣ ಕನ್ನಡ, ಕಾಸರಗೋಡು, ಕೊಡಗು ಹಾಗೂ ಹಾಸನ ಜಿಲ್ಲೆಯ 8 ಕೇಂದ್ರಗಳಲ್ಲಿ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಈ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ನೋಂದಾಯಿಸಲು ಡಿಸೆಂಬರ್ 3 ಕೊನೆಯ ದಿನಾಂಕವಾಗಿದೆ. ಪುತ್ತೂರಿನ ನೆಹರು ನಗರದ ವಿವೇಕಾನಂದ ಆವರಣದಲ್ಲಿರುವ ವಿವೇಕಾನಂದ ಪದವಿಪೂರ್ವ ಕಾಲೇಜು, ಕಡಬದ ಪಂಜ ರಸ್ತೆಯ ವಿದ್ಯಾನಗರದಲ್ಲಿರುವ ಸರಸ್ವತಿ ಪ್ರೌಢಶಾಲೆ, ವಿಟ್ಲದ ಸಾಲೆತ್ತೂರು ರಸ್ತೆಯಲ್ಲಿರುವ ಪಿ.ಎಂ. ಶ್ರೀ ಸರಕಾರಿ ಪ್ರೌಢಶಾಲೆ, ಪಾಣೆಮಂಗಳೂರಿನಲ್ಲಿರುವ ಎಸ್. ಎಲ್. ಎನ್. ಪಿ. ವಿದ್ಯಾಲಯ, ಸುಳ್ಯದ ಜಾಲ್ಸೂರಿನ ವಿನೋಬನಗರದಲ್ಲಿರುವ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆ, ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿರುವ ಶ್ರೀ ಭಾರತಿ ವಿದ್ಯಾಪೀಠ, ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ ಜನರಲ್ ತಿಮ್ಮಯ್ಯ ಪಬ್ಲಿಕ್ ಸ್ಕೂಲ್ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿರುವ ರೋಟರಿ ಇಂಗ್ಲಿಷ್ ಸ್ಕೂಲ್ ಪರೀಕ್ಷಾ ಕೇಂದ್ರಗಳಾಗಿರಲಿವೆ. ವಿದ್ಯಾರ್ಥಿಗಳು ಈ ನೋಂದಣಿ ಲಿಂಕ್ – ತಿತಿತಿ.viveಞಚಿಟಿಚಿಟಿಜಚಿಠಿuಛಿ.ಛಿom/meಜhಚಿ ನಲ್ಲಿ ನೋಂದಾಯಿಸುವಮೂಲಕ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 8971924424,81050 72386, 8073700468ಸಂಪರ್ಕ ಸಂಖ್ಯೆಗಳನ್ನು ಸಂಪರ್ಕಿಸಬಹುದು.

