ಯುವಕನ ಸಾವು ರಹಸ್ಯವೇ? ತಾಯಿ ನೀಡಿದ ಹೇಳಿಕೆಯಲ್ಲಿ ಹೊಸ ಮಾಹಿತಿ

0
43

ಬಂಟ್ವಾಳ : ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಸಂಚಲನಕಾರಿ ಟ್ವಿಸ್ಟ್ – ತಾಯಿ ನೀಡಿದ ದೂರಿನಲ್ಲಿ ಏನಿದೆ? ಬರಿಮಾರು ಗ್ರಾಮದ ದೇಲಬೆಟ್ಟು ನಿವಾಸಿ ರಮಾನಂದ (25) ಎಂಬಾತ ನ.25 ರಂದು ನಾಪತ್ತೆಯಾಗಿದ್ದ ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಬಳಿಕ ಈತನ ಮೃತದೇಹ ವಾಮಂಜೂರು ಕೆತ್ತಿಕಲ್ಲು ಎಂಬಲ್ಲಿ ಪತ್ತೆಯಾಗಿದೆ. ರಮಾನಂದ ಅವರ ಮೃತದೇಹ ಕೆತ್ತಿಕಲ್ಲು ಎಂಬಲ್ಲಿ ಗುಡ್ಡದ ಮರದ ಕೆಳಗೆ ಬಿದ್ದ ಸ್ಥಿತಿಯಲ್ಲಿ ಇತ್ತು, ಮೇಲ್ನೋಟಕ್ಕೆ ಈತ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಹಗ್ಗ ತುಂಡಾಗಿ ಕೆಳಗೆ ಬಿದ್ದಂತೆ ಕಾಣಿಸಿಕೊಂಡಿದ್ದು, ವಾಮಂಜೂರು ಪೋಲೀಸ್ ಠಾಣೆಯಲ್ಲಿ ಈ ಬಗ್ಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು. ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ್ದ ರಮಾನಂದ ಅವರದು ಆತ್ಮಹತ್ಯೆ ಅಲ್ಲ, ಇದೊಂದು ವ್ಯವಸ್ಥಿತ ಕೊಲೆ ಎಂಬ ಬಗ್ಗೆ ಸಂಶಯವಿದ್ದು, ಈ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ನ್ಯಾಯ ಒದಗಿಸಿ ಕೊಡಿ ಎಂದು ತಾಯಿ ವಾಮಂಜೂರು ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here