ಅಟರ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ ಪೂರ್ವಭಾವಿಯಾಗಿ ಕಾರ್ಯಕರ್ತರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಭೆ

0
36

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26,27,28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಇಂದು ದಿನಾಂಕ 03-12-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಚರ್ಚಿಸಿದರು.

ಕಾರ್ಯಕ್ರಮದಲ್ಲಿ ಕಾಪು ಕಡಲ ಪರ್ಬ ಲೋಗೋ ಅನಾವರಣಗೊಳಿಸಿ ವಿವಿಧ ಸಮಿತಿಗಳನ್ನು ರಚಿಸಿ ಜವಾಬ್ದಾರಿ ಹಂಚಿಕೆ ಮಾಡಲಾಯಿತು. 3 ದಿನಗಳ ಕಾಲ ನಡೆಯುವ ಈ ಕಡಲ ಪರ್ಬ ಕಾರ್ಯಕ್ರಮದಲ್ಲಿ ಬೀಚ್ ಉತ್ಸವ, ಅಹಾರ ಮೇಳ, ಕ್ರೀಡೋತ್ಸವ, ಸಾಂಸ್ಕೃತಿಕ ಉತ್ಸವ ನಡೆಯಲಿದೆ. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಕಾಪು ಪುರಸಭೆಯ ಅಧ್ಯಕ್ಷರಾದ ಹರೀಣಾಕ್ಷಿ ದೇವಾಡಿಗ, ಉಡುಪಿ ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಹಾಗೂ ಪಕ್ಷದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here