ಮೂಡುಬಿದಿರೆ : ಮಹಾವೀರ ಕಾಲೇಜಿನ ವಾರ್ಷಿಕೋತ್ಸವ

0
104

ವರದಿ ರಾಯಿ ರಾಜ ಕುಮಾರ
ಮೂಡುಬಿದಿರೆ ಮಹಾವೀರ ಕಾಲೇಜಿನ ವಾರ್ಷಿಕೋತ್ಸವ ದಶಂಬರ 6 ರಂದು ಕಾಲೇಜಿನ ಸಭಾ ಭವನದಲ್ಲಿ ನಡೆಯಿತು. ಡಾ. ಶರತ್ ಗೋರೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಅವರ ತಮ್ಮ ಭಾಷಣದಲ್ಲಿ ಶಾಲೆಯ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಆಡಳಿತ ಮಂಡಳಿಯ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ ಅಧ್ಯಕ್ಷತೆ ವಹಿಸಿದ್ದರು.
ಪಿ ಯು ಪ್ರಾಂಶುಪಾಲೆ ವಿಜಯಲಕ್ಷ್ಮಿ ಕಾಲೇಜಿನ ವರದಿಯನ್ನು ವಾಚಿಸಿದರು. ಇದೇ ಸಂದರ್ಭದಲ್ಲಿ ಪಿ ಯು ಪ್ರಾಂಶುಪಾಲರಾಗಿದ್ದ ರಮೇಶ್ ಭಟ್ ಅವರನ್ನು ದಂಪತಿ ಸಮೇತ ಸನ್ಮಾನಿಸಲಾಯಿತು. ಉಪನ್ಯಾಸಕರುಗಳಾದ ಪೂರ್ಣಿಮಾ, ಶ್ವೇತಾ ಬಂಗೇರಾ, ಚಿತ್ರಲೇಖಾ ಹಾಗೂ ಅಕ್ಷಿತ್ ರೈ ಬಹುಮಾನಿತರ ಪಟ್ಟಿಯನ್ನು ವಾಚಿಸಿದರು. ಕಾಲೇಜಿನ ಪ್ರಾಚಾರ್ಯ ಡಾ. ರಾಧಾಕೃಷ್ಣ ವೇದಿಕೆಯಲ್ಲಿ ಹಾಜರಿದ್ದರು.
ವಿದ್ಯಾರ್ಥಿಗಳಾದ ಸ್ಪಂದನ, ಪರಮೇಶ್ವರಿ ಅತಿಥಿಗಳ ಪರಿಚಯ ಗೈದರು. ಪೂರ್ಣಿಮಾ ಸ್ವಾಗತಿಸಿದರು. ರಮೀಜಾ ಕಾರ್ಯಕ್ರಮ ನಿರ್ವಹಿಸಿದರು, ಶಾಲಿನಿ ವಂದಿಸಿದರು.
.

LEAVE A REPLY

Please enter your comment!
Please enter your name here