ಸುಳ್ಯ: ಆತ್ಮಹತ್ಯೆಗೆ ಯತ್ನಿಸಿ ನೇಣು ಬಿಗಿದ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

0
139

ಕಲ್ಲುಗುಂಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿ ನೇಣು ಬಿಗಿದು ಜಿಗಿದ ವೇಳೆ ಹಗ್ಗ ತುಂಡಾಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರು ಕಲ್ಲುಗುಂಡಿ ಕೂಲಿಶೆಡ್ ಬಳಿ ಕಳೆದ ಹಲವು ವರ್ಷಗಳಿಂದ ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಿದ್ದ , ಐವರ್ನಾಡು ಗ್ರಾಮದ ಮಾಧವ (60) ಎಂದು ತಿಳಿದು ಬಂದಿದೆ.ಇವರು ಬಾಡಿಗೆ ರೂಮಿನಲ್ಲಿ ಡಿ. 5ರಂದು ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಬಿಗಿದು ಕೆಳಕ್ಕೆ ಜಿಗಿದ ಸಂದರ್ಭ ಕೇಬಲ್ ತುಂಡಾಗಿ ನೆಲಕ್ಕೆ ಬಿದ್ದು ತಲೆಗೆ ಗಾಯವಾಗಿತ್ತು ಎಂದು ತಿಳಿದು ಬಂದಿದೆ. ಬಳಿಕ ಅವರನ್ನು ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here