ವಿಟ್ಲ : ವಿದ್ಯುತ್‌ ತಂತಿ ತಗುಲಿ ವ್ಯಕ್ತಿ ಮೃತ್ಯು

0
107

ಕರೋಪಾಡಿ ಗ್ರಾಮದ ಪದ್ಯಾನ ಗಡಿಭಾಗ ಎಂಬಲ್ಲಿ ಅಲ್ಯುಮಿನಿಯಂ ಕೊಕ್ಕೆಯಿಂದ ತೆಂಗಿನ ಕಾಯಿ ಕೀಳುತ್ತಿದ್ದ ವೇಳೆ ಸಮೀಪದ ಹೈಟೆನ್ಶನ್ ಲೈನ್ ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೊರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ನಾರಾಯಣ ನಾಯ್ಕ ಎಂದು ಗುರುತಿಸಲಾಗಿದೆ.

ಇವರು ಡಿ.7 ರಂದು ಬೆಳಿಗ್ಗೆ ಮನೆಯ ಎದುರುಗಡೆಯ ತೆಂಗಿನ ಮರದಿಂದ ಅಲ್ಯುಮಿನಿಯಂ ಕೊಕ್ಕೆಯಿಂದ ತೆಂಗಿನ ಕಾಯಿ ಕೀಳುತ್ತಿದ್ದ ವೇಳೆ ಕೊಕ್ಕೆ ಆಕಸ್ಮಿಕವಾಗಿ ಪಕ್ಕದಲ್ಲಿರುವ ಎಚ್ ಟಿ ಲೈನ್ ವಿದ್ಯುತ್ ತಂತಿಗೆ ತಗುಲಿ ಶಾಕ್ ಹೊಡೆದು ಕೆಳಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಕೂಡಲೇ ಇವರನ್ನು ದೇರಳಕಟ್ಟೆಯ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here