ಪೂಜ್ಯ ಶ್ರೀ ಶ್ರೀ ಶ್ರೀ ಪ್ರಣವಾನಂದ ಸ್ವಾಮೀಜಿ, ಪೀಠಾಧಿಪತಿಗಳು ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠ ಇವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಇಂದು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು. ಹಾಗೂ ಸ್ವಾಮೀಜಿಯವರು ಜನವರಿ ತಿಂಗಳಿನಲ್ಲಿ ಈಡಿಗ, ಬಿಲ್ಲವ, ನಾಮಧಾರಿ, ದೀವರ, ತೀಯ ಸಮುದಾಯಗಳ ಹಲವು ಬೇಡಿಕೆಗಳ ಈಡೇರಿಕೆಗಾಗಿ 41 ದಿನಗಳ ಕಾಲ 700 ಕಿಲೋ ಮೀಟರ್ ಐತಿಹಾಸಿಕ ಪಾದಯಾತ್ರೆಯನ್ನು ಕೈಗೊಳ್ಳಲಿರುವ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಕೋಟ್ಯಾನ್ ಜೇoಕ್ಯಾರ್ ಉಪಸ್ಥಿತರಿದ್ದರು.


