
ಮೂಡುಬಿದಿರೆ: ಸಮಾಜ ಮಂದಿರದ ಬಳಿ ಇರುವ ಪೆಟ್ರೋಲ್ ಬಂಕ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳ ಮೇಲೆ ಗುರುವಾರ ಸಂಜೆ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ನಡೆದಿದೆ. ಎರಡು ದ್ವಿಚಕ್ರ ವಾಹನಗಳಲ್ಲಿ ನಾಲ್ವರು ಯುವಕರು ಪೆಟ್ರೋಲ್ ಬಂಕ್‌ಗೆ ಆಗಮಿಸಿದ್ದು, ಇವರಲ್ಲಿ ಇರುವೈಲ್ ಮೂಲದ *ಪುನೀತ್* ಮತ್ತು *ಶಿಶಿರ್* ಸಿಬ್ಬಂದಿ ಮೌನೇಶ್ ಅವರೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾರೆ.

ವಾಗ್ವಾದ ತೀವ್ರವಾಗುತ್ತಿದ್ದಂತೆ, ಮಧ್ಯಪ್ರವೇಶಿಸಲು ಬಂದ ಸಿಬ್ಬಂದಿ ಸುರೇಶ್ ಮತ್ತು ಪ್ರವೀಣ್ ಮೇಲೂ ಇಬ್ಬರೂ ದಾಳಿ ನಡೆಸಿದ್ದಾರೆ. ಮೂವರು ಸಿಬ್ಬಂದಿಗೂ ಗಾಯಗಳಾಗಿದ್ದು, ಅವರನ್ನು ತಕ್ಷಣ ಮೂಡುಬಿದಿರೆಯ ಆಳ್ವಾಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರು ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ದೃಶ್ಯಗಳು ಪೆಟ್ರೋಲ್ ಬಂಕ್‌ನ ಸಿಸಿಟಿವಿ ಕ್ಯಾಮರಾಗಳಲ್ಲಿ ಸಂಪೂರ್ಣವಾಗಿ ದಾಖಲಾಗಿದ್ದು, ಅದರ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಖ್ಯ ಆರೋಪಿಗಳಾದ ಪುನೀತ್ ಮತ್ತು ಶಿಶಿರ್ ಅವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಉಳಿದ ಇಬ್ಬರ ವಿಚಾರಣೆಯೂ ನಡೆಯುತ್ತಿದೆ.

