ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಇದರ ಸಹಯೋಗದಲ್ಲಿ ಅಬ್ಬನಡ್ಕ – ಇಟ್ಟಮೇರಿ ಸಂಪರ್ಕ ರಸ್ತೆಯಿಂದ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ಸಂಪರ್ಕಿಸುವ ರಸ್ತೆಯ ಇಕ್ಕೆಲಗಳಲ್ಲಿದ್ದ ಹುಲ್ಲು-ಗಿಡಗಂಟಿ-ಪೊದೆ ಕಡಿದು ಸ್ವಚ್ಛ ಮಾರ್ಗಂ ಕಾರ್ಯಕ್ರಮದ ಮೂಲಕ ಸ್ವಚ್ಛತಾ ಅಭಿಯಾಣ ನಡೆಸಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅವರು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಕಾರ್ಯದರ್ಶಿ ಸತೀಶ್ ಅಬ್ಬನಡ್ಕ , ಕೋಶಾಧಿಕಾರಿ ಪ್ರದೀಪ್ ಸುವರ್ಣ ಕೆಮ್ಮಣ್ಣು , ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಅಧ್ಯಕ್ಷರಾದ ಕೀರ್ತನ್ ಪೂಜಾರಿ, ಸದಸ್ಯರಾದ ವೀಣಾ ಪೂಜಾರಿ, ಸುಭಾಸ್ ಕೆಮ್ಮಣ್ಣು, ಕಿರಣ್ ಶೆಟ್ಟಿ, ಅಭಿಷೇಕ್ ಕುಲಾಲ್, ಮೊದಲಾದವರಿದ್ದರು.


