ಡಿ.13 ರಂದು ಉಡುಪಿಯಲ್ಲಿ ಆಳ್ವಾಸ್‌ ಸಾಂಸ್ಕೃತಿಕ ಸಂಭ್ರಮ

0
60

ಉಡುಪಿ : ಆಳ್ವಾಸ್‌ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದ ಶ್ರೀ ವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ಡಿ.13ರ ಶನಿವಾರ ಸಂಜೆ 5:45ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಪ್ರದರ್ಶನಗೊಳ್ಳಲಿದೆ. ಪ್ರಾರಂಭಿಕ 45 ನಿಮಿಷಗಳ ಕಾಲ ನಡೆಯುವ ಸಭಾ ಕಾರ್ಯಕ್ರಮವನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದು , ಕಿರಿಯ ಯತಿಗಳಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿರುವರು. ಉಡುಪಿ ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜದ ಎಲ್ಲಾ ಸ್ತರಗಳ ಪ್ರಮುಖರು , ಗಣ್ಯರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ .

ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಮಾಜಿ ಸಚಿವ ಡಾ.ವಿ.ಎಸ್.ಆಚಾರ್ಯರಿಗೆ ಅರ್ಪಿಸಲಾಗಿದೆ . ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಭಾರತೀಯ ಕಲಾಪ್ರಕಾರಗಳಾದ ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ- ಅಷ್ಟಲಕ್ಷ್ಮಿ ಬಡಗುತಿಟ್ಟು ಯಕ್ಷಗಾನ, ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡಾನ್ಸ್, ಮಲ್ಲಕಂಬ ಹಾಗೂ ಕಸರತ್ತು ಸೃಜನಾತ್ಮಕ ನೃತ್ಯ , ಡೊಳ್ಳು ಕುಣಿತ, ಕಥಕ್ ವರ್ಷಧಾರೆ , ಪುರುಲಿಯಾ ಸಿಂಹ ನೃತ್ಯ ತೆಂಕುತಿಟ್ಟು ಯಕ್ಷಗಾನ ಹಿರಣ್ಯಾಕ್ಷ ವಧೆ , ಬೊಂಬೆ ವಿನೋದಾವಳಿಯ ಪ್ರದರ್ಶನ ನಡೆಯಲಿದೆ .ಸಭಾ ಕಾರ್ಯಕ್ರಮಕ್ಕೂ ಮುನ್ನ ಆಳ್ವಾಸ್ ವಿದ್ಯಾರ್ಥಿಗಳಿಂದ ಸಿಂಗಾರಿ ಮೇಳ ಪ್ಯೂಷನ್ ನಡೆಯಲಿದೆ . ಬೊಂಬೆ ವಿನೋದಾವಳಿಯೊಂದಿಗೆ ಆಕರ್ಷಕ ಸಿಡಿಮದ್ದಿನ ಪ್ರದರ್ಶನವಿರಲಿದೆ . ಪ್ರೇಕ್ಷಕರಿಗಾಗಿ 15,000ಕ್ಕೂ ಅಧಿಕ ಆಸನದ ವ್ಯವಸ್ಥೆ ಮಾಡಲಾಗಿದ್ದು , ಎಲ್ಲರಿಗೂ ಉಚಿತ ಪ್ರವೇಶವಿರಲಿದೆ .

LEAVE A REPLY

Please enter your comment!
Please enter your name here