ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ: ಒರ್ವ ಸಾವು

0
145

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಪಡುಕರೆ ಸಂತೋಷ್ ಮೊಗವೀರ (30) ಕೊಲೆಗೀಡಾದವರು. ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಭಾನುವಾರ ರಾತ್ರಿ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ ಮೊಗವೀರನಿಗೆ ಮಾರಣಾಂತಿಕ ಹಲ್ಲೆಯಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಬಳಿಕ ಅವರನ್ನು ಸ್ಥಳೀಯರು ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸಂತೋಷ್ ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.

ಘಟನಾಸ್ಥಳಕ್ಕೆ ಪೊಲೀಸರು ಬಂದು ಪರಿಶೀಲಿಸಿ ನಾಲ್ವರು ಯುವಕರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here