ಸಿನಿಮೀಯ ಶೈಲಿಯಲ್ಲಿ ಆರೋಪಿಯನ್ನು ಹಿಡಿದ ಮೂಡುಬಿದಿರೆಯ ಸಿಂಗಂ, ಸಂದೇಶ್ ಪಿ.ಜಿ

0
190

ಮೂಡುಬಿದಿರೆ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹಿಡಿಯಲು ಹೋದಾಗ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ ಘಟನೆಯಲ್ಲಿ, ಮೂಡುಬಿದಿರೆ ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಹಾಗೂ ಅವರ ತಂಡವು ಸಿನಿಮೀಯ ರೀತಿಯಲ್ಲಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರು ಚೇಸ್ ಮಾಡಿ ವಶಕ್ಕೆ. ಮೂಲಗಳ ಪ್ರಕಾರ, ಆರೋಪಿಯನ್ನು ಬಂಧಿಸಲು ಹೋದಾಗ ಆತ ಕೊಡಂಗಲ್ಲು ಬಳಿ ಇದ್ದನು. ಪೊಲೀಸರು ಹಿಂಬಾಲಿಸುತ್ತಿರುವುದನ್ನು ಅರಿತ ಆರೋಪಿಯು ತಕ್ಷಣ ತನ್ನ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ, ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಹಾಗೂ ತಂಡವು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು. ಆರೋಪಿಯ ಕಾರನ್ನು ಹಿಂಬಾಲಿಸಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಆರೋಪಿಯು ಕಾರನ್ನು ಹಿಮ್ಮುಖವಾಗಿ (Reverse) ತೆಗೆದುಕೊಂಡು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಆರೋಪಿಯ ಕಾರು ಚರಂಡಿಯೊಂದರಲ್ಲಿ ಸಿಲುಕಿಕೊಂಡಾಗ, ಅಲ್ಲಿಂದಲೂ ತಪ್ಪಿಸಿಕೊಳ್ಳಲು ಆತ ಕೊನೆಯ ಪ್ರಯತ್ನ ಮಾಡಿದ್ದಾನೆ. ಆದರೆ, ಪೊಲೀಸರ ಸಕಾಲಿಕ ಮತ್ತು ಚುರುಕಿನ ಕಾರ್ಯಾಚರಣೆಯಿಂದಾಗಿ ಆತನನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.

LEAVE A REPLY

Please enter your comment!
Please enter your name here