ತುಳು ನಾಡು-ನುಡಿಗೆ ಜೈನರ ಕೊಡುಗೆ : ಮೂಡುಬಿದಿರೆ ಜೈನಮಠದಲ್ಲಿ ಉಪನ್ಯಾಸ- ಸಂವಾದ

0
121


ವರದಿ ಮಂದಾರ ರಾಜೇಶ್ ಭಟ್, ತುಳುನಾಡು ವಾರ್ತೆ

ತುಳುನಾಡು ÷ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈನ ಮಠ ಮೂಡುಬಿದಿರೆ , ಧವಳತ್ರಯ ಜೈನ ಕಾಶಿ ಟ್ರಸ್ಟ್ (ರಿ) ನಾದ ನೂಪುರ ಯಕ್ಷೋತ್ಥಾನ ಟ್ರಸ್ಟ್ ಸಹಭಾಗಿತ್ವದಲ್ಲಿ ಆಯೋಜಿಸಿದ ‘ತುಳು ನಾಡು ನುಡಿಗೆ ಜೈನರ ಕೊಡುಗೆ’ ಎಂಬ ಕಾರ್ಯಕ್ರಮವನ್ನು ಮೂಡುಬಿದಿರೆ ಜೈನ ಮಠದ ಜಗದ್ಗುರು ಡಾ.ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಪಂಡಿತಾರ್ಯವರ್ಯ ಮಹಾಸ್ವಾಮೀಜಿ ಅವರು ಕಾರ್ಯಕ್ರಮ ಉದ್ಘಾಟಿಸಿ ಆಶೀವರ್ಚನ ನೀಡಿದರು.
ಜೈನ ಧರ್ಮ ತುಳುನಾಡಿನ ಸಾಹಿತ್ಯ ಭಾಷೆಗೆ ಕೊಡುಗೆ ನೀಡಿದ ಮತ ಧರ್ಮ ಗಳಲ್ಲಿ ಸಾಮರಸ್ಯ ಬೆಳೆಸಿ ತನ್ನ ಆಡು ಭಾಷೆಯ ಪ್ರಯೋಗ ಮೂಲಕ ವಿಶಿಷ್ಟತೆ ಮೆರೆದಿದೆ ಅವಿಭಜಿತ ಜಿಲ್ಲೆಯ ಸರ್ವಾoಗಿಣ ಅಭಿವೃದ್ಧಿ, ಸಾಂಸ್ಕೃತಿಕ ನೆಲೆಗಳ ಪೋಷಣೆ ಮಾಡಿದೆ ಎಂದರು.

ತುಳು ನಾಡು ನುಡಿಗೆ ಜೈನರ ಕೊಡುಗೆ ಎಂಬ ವಿಷಯದ ಬಗ್ಗೆ ಪ್ರೊಫೆಸರ್ ಎಂ ಕೆ ರವೀಂದ್ರನಾಥ ಉಪನ್ಯಾಸವನ್ನು ನೀಡಿದರು.

ತುಳುನಾಡು ನುಡಿಗೆ ಜೈನ ವಿದ್ವಾಂಸರು, ಜೈನ ರಾಜರು, ರಾಜ ಮನೆತನಗಳು, ಜಿನ ಆಲಯಗಳು ಚಾರಿತ್ರಿಕವಾದ ಕೊಡುಗೆಗಳನ್ನು ನೀಡಿವೆ. ಶಾಂತಿ ಸಾಮರಸ್ಯ ಹಾಗೂ ಸಾಮಾಜಿಕ ಸಮನ್ವಯತೆಗೂ ಜೈನರ ಕೊಡುಗೆ ಅನನ್ಯವಾದುದು ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಹೇಳಿದರು.

ಉಜಿರೆ ಎಸ್ .ಡಿ.ಎಂ. ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಸನ್ಮತಿ ಕುಮಾರ್ ಅವರು ‘ತುಳುನಾಡು ನುಡಿಗೆ ಜೈನರ ಕೊಡುಗೆ’ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ತುಳುನಾಡಿನ ಸಾಹಿತ್ಯ ಸಾಂಸ್ಕ್ರತಿಕ ಸಮೃದ್ಧಿಯಲ್ಲಿ ಜೈನರ ಕೊಡುಗೆ ಅನನ್ಯವಾದುದು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ವಹಿಸಿದ್ದರು.
ಕಾಲೇಜು ವಿದ್ಯಾರ್ಥಿಗಳ ಪರವಾಗಿ ಭುವನೇಂದ್ರ ಕಾಲೇಜಿನ ವಿದ್ಯಾರ್ಥಿ ಸುತೇಜ ಇವರು ‘ತುಳುನಾಡು ನುಡಿಗೆ ಜೈನರ ಕೊಡುಗೆ’ ವಿಷಯದ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಲೇಖಕಿ ವೀಣಾ ಬಿ.ಆರ್. ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ನೆಲ್ಲಿಕ್ಕಾರು ಕ್ಷೇತ್ರದ ಮೋಕ್ತೇಸರ ವಿಮಲ್ ಕುಮಾರ್ ಬೆಟ್ಕೇರಿ , ನಾದ ನೂಪುರ ಟ್ರಸ್ಟ್ ಅಧ್ಯಕ್ಷ ಗೋವಿಂದ ವಂಡಾರು, ಕಾರ್ಯದರ್ಶಿ ಶುಭಾಶಯ ಉಪಸ್ಥಿತರಿದ್ದರು.
ಗುರುಪ್ರಸಾದ್ ಭಟ್ ಕಾರ್ಯಕ್ರಮ ನಿರೂಪಿಸಿದರು, ಮಠದ ವ್ಯವಸ್ಥಾಪಕ ಸಂಜಯಂತ್ ಕುಮಾರ್ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here