ಕೂಡ್ಲು ಜಲಪಾತದಲ್ಲಿ , ಬಂಡೆಯಿಂದ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು

0
174

ಹೆಬ್ರಿ : ಪ್ರವಾಸಿ ತಾಣ ಹೆಬ್ರಿಯ ಕೂಡ್ಲು ಫಾಲ್ಸ್ನ ಬಂಡೆಯ ಮೇಲಿನಿಂದ ಬಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ವರದಿಯಾಗಿದೆ . ಮೃತರನ್ನು ಉಡುಪಿಯ ಕೊಂಜಾಡಿ ಮೂಲದ ಬೆಂಗಳೂರು ನಿವಾಸಿ ಸವಿತಾ ಪಿ. ಶೆಟ್ಟಿ ಎಂಬವರ ಮಗ ಮನ್ವಿತ್ (25) ಎಂದು ಗುರುತಿಸಲಾಗಿದೆ. ಮನ್ವಿತ್ ಡಿ.12 ರಂದು ತಮ್ಮ ಸ್ವಂತ ಮನೆಯಾದ ಕೊಂಜಾಡಿಗೆ ಬಂದಿದ್ದು, ಡಿ.14 ರಂದು ತನ್ನ ಸ್ನೇಹಿತರೊಂದಿಗೆ ಹೆಬ್ರಿಯ ಕೂಡ್ಲು ಫಾಲ್ಸ್ಗೆ ಹೋಗಿದ್ದರು . ಅಲ್ಲಿ ಸ್ನೇಹಿತರು ಸ್ನಾನ ಮಾಡುತ್ತಿರುವಾಗ ಮನ್ವಿತ್ ಎತ್ತರದ ಬಂಡೆಯ ಮೇಲೆ ಕುಳಿತುಕೊಂಡಿದ್ದರು . ಈ ವೇಳೆ ಅವರು ಆಕಸ್ಮಿಕವಾಗಿ ತಲೆ ತಿರುಗಿ ಕೆಳಗೆ ನೀರಿಗೆ ಬಿದ್ದಿದ್ದಾರೆ. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಡಿ. 17ರಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಮನ್ವಿತ್‌ಗೆ ಮೂರ್ಛ ರೋಗವಿದ್ದು, ಈ ಬಗ್ಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

LEAVE A REPLY

Please enter your comment!
Please enter your name here