ರಾಮನಗರದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಮೂವರು ಆರೋಪಿಗಳನ್ನು ಮಾಗಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ವಿಕಾಸ್, ಪ್ರಶಾಂತ್, ಚೇತನ್ ಎಂದು ಗುರುತಿಸಲಾಗಿದೆ .ಬೆಂಗಳೂರಿನ ಕಾಲೇಜಿನಲ್ಲಿ 19 ವರ್ಷದ ಯುವತಿ ಓದುತ್ತಿದ್ದಳು. ವಿಕಾಸ್ ಎಂಬಾತ ಮೊದಲು ಯುವತಿಯನ್ನು ಪರಿಚಯ ಮಾಡಿಕೊಂಡು ಆಕೆಯ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದನು. ಅದನ್ನು ವಿಡಿಯೋ ಮಾಡಿಕೊಂಡ ವಿಕಾಸ್ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಈ ವೀಡಿಯೊ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿದ ವಿಕಾಸ್ ಸ್ನೇಹಿತರಾದ ಪ್ರಶಾಂತ್ ಚೇತನ್ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ತಿಳಿದು ಬಂದಿದೆ. ಇದರಿಂದ ಮನನೊಂದ ವಿದ್ಯಾರ್ಥಿನಿ ಮಾಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು , ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ .

