ವರದಿ ರಾಯಿ ರಾಜ ಕುಮಾರ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಿನ್ನ ಸಾಮರ್ಥ್ಯದ ತರಬೇತಿ ಶಾಲೆಗಳ ಮತ್ತು ಸಂಘ-ಸಂಸ್ಥೆಗಳ ಸಹಕಾರದಲ್ಲಿ ಮೂಡುಬಿದಿರೆ ಆದರ್ಶ ಗ್ರಾಮಭ್ಯವೃದ್ದಿ ಮತ್ತು ಸೇವಾ ಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ವಿಶೇಷ ಚೇತನರ ಸಮಾವೇಶ ಮತ್ತು ಕಲಾಮೇಳ ನಡೆಯಿತು. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಹಾಗೂ ಹಿತೈಷಿಗಳ ಜಾಗೃತಿ ಜಾಥಾ ಮೆರವಣಿಗೆ ಬಸ್ಸ್ಟ್ಯಾಂಡ್ ಬಳಿಯಿಂದ ಸಮಾಜ ಮಂದಿರದ ತನಕ ನಡೆಯಿತು.
ಸಭಾ ಕಾರ್ಯಕ್ರಮದಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಅರ್ಜುನ್ ಭಂಡಾರ್ಕರ್ ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿಶೇಷ ಚೇತನರಿಗೆ ಮಾಡುವ ಸಹಾಯ ಭಗವಂತನಿಗೆ ಸಮರ್ಪಿತವಾಗುತ್ತದೆ. ಅವರ ಕಾರ್ಯ ನಿಜಕ್ಕೂ ಪ್ರಶಂಸನಿಯವಾದದು ಎಂದರು. ಜಿಲ್ಲಾ ವಿಶಿಷ್ಟ ಚೇತನರ ಸಂಘದ ಅಧ್ಯಕ್ಷ ಮುರಳಿಧರ ನಾಯಕ್ ಮಾತನಾಡಿ ವಿಶೇಷ ಚೇತನರಿಗೆ ಸರಕಾರದಿಂದ ಸಾಕಷ್ಟು ಸೌಲಭ್ಯಗಳನ್ನು ಒದಗಿಸಿಕೊಡಲಾಗುತ್ತಿದೆ. ಹಲವಾರು ಸಂಘ ಸಂಸ್ಥೆಗಳು, ಹಿತೈಷಿಗಳು ಸಾಕಷ್ಟು ಪ್ರೋತ್ಸಾಹವನ್ನು ನೀಡುತ್ತಿದ್ದಾರೆ ಎಂದು ಮೆಚ್ಚಿಕೊಂಡರು. ವೇದಿಕೆಯಲ್ಲಿ ಹಾಜರಿದ್ದ ಪೊಲೀಸ್ ನಿರೀಕ್ಷಕ ಸಂದೇಶ ಪಿ ಜಿ, ಪುರಸಭಾ ಮಾಜಿ ಅಧ್ಯಕ್ಷ ಜಯಶ್ರೀ ಶುಭ ಹಾರೈಸಿದರು. ಸೇವಾ ಸಂಸ್ಥೆಯ ಅಧ್ಯಕ್ಷ ಜೇಕಬ್ ವರ್ಗೀಸ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ನಿರ್ದೇಶಕರುಗಳಾದ ರೂಬಿ ವರ್ಗಿಸ್, ಶ್ರೀಲತಾ, ಜಯಶ್ರೀ, ಗಣೇಶ್ ಬಾರ್ದಿಲ ಕಾರ್ಯಕ್ರಮವನ್ನು ಸಂಘಟಿಸಿದರು .


