ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರಿಗೆ ಕ್ರಿಸ್‌ಮಸ್ ಹಬ್ಬದ ಶುಭಾಶಯ

0
86

ನಾಡಿನ ಸಮಸ್ತ ಕ್ರೈಸ್ತ ಸಮುದಾಯದ ಪರವಾಗಿ ಮಾನ್ಯ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಡಿ.ಕೆ. ಶಿವಕುಮಾರ್ ರವರಿಗೆ ಕ್ರಿಸ್ ಮಸ್ ಹಬ್ಬದ ಶುಭಾಶಯ ಕೋರಿದ ಕ್ರೈಸ್ತ ನಾಯಕರು ಮತ್ತು ವಿಧಾನ ಪರಿಷತ್ತಿನ ಶಾಸಕರಾದ ಐವನ್ ಡಿ ಸೋಜಾ.

ಕರಾವಳಿ ಕರ್ನಾಟಕದಲ್ಲಿ ಕ್ರಿಸ್ ಮಸ್ ಹಬ್ಬಕ್ಕೆ ಸಿದ್ಧಪಡಿಸಲಾದ ಕೇಕ್, ನ್ಯೂರಿ, ಕುಕ್ಕೀಸ್, ಕಿಡಿಯೋ, ಅಕ್ಕಿಲಡ್ಡು, ಖಾದ್ಯ ತಿಂಡಿ-ತಿನಿಸುಗಳ ಜೊತೆ ಕ್ರಿಸ್ ಮಸ್ ಟೋಪಿಯನ್ನು ಮಾನ್ಯ ಉಪಮುಖ್ಯಮಂತ್ರಿಗಳಿಗೆ ನೀಡಿ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಲಾಯಿತು.

ಈ ಸಂದರ್ಭದಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳು ನಾಡಿನ ಎಲ್ಲಾ ಜನತೆಗೆ ಕ್ರಿಸ್ ಮಸ್ ಹಬ್ಬವು ಶಾಂತಿ -ಸೌಹರ‍್ಧತೆಯಿಂದ ಮೂಡಿ ಬರಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ವಿಜಯ ಬೈಕಂಪಾಡಿ, ಕ್ರೈಸ್ತ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕರಾದ ಶ್ರೀ ಎಸ್ ಚಿನ್ನಪ್ಪ ಮತ್ತು ಶ್ರೀ ಸಿರಿಲ್ ಡಿ ಸೋಜಾ ರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here