ಬೆಳಗಾವಿ:ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ವಿಧಾನಸಭೆಯ ಗಣ್ಯರ ಸಮ್ಮುಖದಲ್ಲಿ ಆಯೋಜಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪೊಳಲಿ/ಬೊಕ್ಕಸ ಪ್ರದೇಶದ ಶಿವರಂಜಿನಿ ಕಲಾಕೇಂದ್ರದಡಿ ಕಾರ್ಯನಿರ್ವಹಿಸುತ್ತಿರುವ *ಚಾರಿಟೇಬಲ್ ಟ್ರಸ್ಟ್ (ರಿ.)*ನ ವಿದ್ಯಾರ್ಥಿಗಳು ‘ಗಾನಾಮೃತ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪ್ರದರ್ಶಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.
ವಿದ್ಯಾರ್ಥಿಗಳ ಸಂಗೀತ ಪ್ರದರ್ಶನಕ್ಕೆ ವಿಧಾನಸಭೆಯಲ್ಲಿ ಹಾಜರಿದ್ದ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿದ ಕರ್ನಾಟಕ ವಿಧಾನಸಭಾಧ್ಯಕ್ಷರಾದ ಸನ್ಮಾನ್ಯ ಯು.ಟಿ. ಖಾದರ್ ಫರೀದ್ ಅವರಿಗೆ ಹಾಗೂ ಕಾರ್ಯಕ್ರಮ ಯಶಸ್ವಿಗೆ ಸಹಕಾರ ನೀಡಿದ ಸಜೀಪ ನಡು ಪಂಚಾಯಿತಿನ ಮಾಜಿ ಅಧ್ಯಕ್ಷರಾದ ಮೊಹಮ್ಮದ್ ನಾಸಿರ್ ಅವರಿಗೆ ಶಿವರಂಜಿನಿ ಕಲಾಕೇಂದ್ರ ಹಾಗೂ ವಿದ್ಯಾರ್ಥಿಗಳ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸಲಾಯಿತು. ಈ ಸಾಧನೆಯು ಗ್ರಾಮೀಣ ಪ್ರತಿಭೆಗಳಿಗೆ ರಾಜ್ಯಮಟ್ಟದ ವೇದಿಕೆ ದೊರೆತಂತಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೇರಣೆಯಾಗಿದೆ.
