ಬಂದಾರು ಬಂದಾರು ಗ್ರಾಮ ಮೈರೋಳ್ತಡ್ಕ ಅಂಗನವಾಡಿ ಕೇಂದ್ರ ದಲ್ಲಿ ಪೋಲಿಯೋ ದಿನದ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ, ಮೈರೋಳ್ತಡ್ಕ ಅಂಗನವಾಡಿ ಕೇಂದ್ರ ಕಾರ್ಯಕರ್ತೆ ಯಶೋಧ, ಸುಣ್ಣಾನ ಅಂಗನವಾಡಿ ಕೇಂದ್ರ ಕಾರ್ಯಕರ್ತೆ ಸುಶೀಲ, ಹಾಗೂ ಅರೋಗ್ಯ ಇಲಾಖೆಯ ಸಿಬ್ಬಂದಿಗಳು, ಪುಟಾಣಿಗಳು ಉಪಸ್ಥಿತರಿದ್ದರು.
Home Uncategorized ಬಂದಾರು ಗ್ರಾಮ ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪಂಚಾಯತ್ ಅಧ್ಯಕ್ಷರಿಂದ ಪೋಲಿಯೋ ಲಸಿಕೆಗೆ ಚಾಲನೆ

