ಹಾಸನದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೋರ್ವಳು ಮಗುವಿಗೆ ಜನ್ಮ ನೀಡಿದ್ದು , ಶಾಲಾ ವ್ಯಾನ್ ಚಾಲಕನಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆಯು ಹಾಸನದ ಚನ್ನರಾಯಪಟ್ಟಣದ ನುಗ್ಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಿತ್ಯ ಶಾಲೆಗೆ ವ್ಯಾನ್‌ನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಗೆ ವ್ಯಾನ್ ಚಾಲಕ ರಂಜನ್ ಪರಿಚಯವಾಗಿದ್ದಾನೆ. ಹೀಗೆ ಪರಿಚಯನಾದ ರಂಜನ್, ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಶ್ರವಣಬೆಳಗೊಳಕ್ಕೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಪರಿಣಾಮ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು , ಎರಡು ದಿನಗಳ ಹಿಂದೆ ಮನೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ರಂಜನ್ ಚನ್ನರಾಯಪಟ್ಟಣದ ಬರಗೂರು ನಿವಾಸಿಯಾಗಿದ್ದು , ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ . ಬಾಲಕಿ ಪೋಷಕರು ನುಗ್ಗೆಹಳ್ಳಿ ಠಾಣೆಯಲ್ಲಿ ದೂರು ನೀಡಿದ್ದು, ರಂಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ನಾಪತ್ತೆಯಾಗಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

