ಮಂಗಳೂರು ಕಂಬಳ ದಶಂಬರ 26

0
45

ದ.ಕ. ಜಿಲ್ಲೆ , ತುಳುನಾಡಿನ ಮಣ್ಣಿನ ಧಾರ್ಮಿಕ ಕಟ್ಟು ಕಟ್ಟಳೆಗಳೊಂದಿಗೆ ಗ್ರಾಮೀಣ ಸೊಗಡನ್ನು ಸಾರುವ ಇಲ್ಲಿನ ಜನಜೀವನವನ್ನು ಪ್ರತಿಬಿಂಬಿಸುವ ಕೃಷಿಕ ಮತ್ತು ಜಾನುವಾರುಗಳ ಬದುಕಿನ ನಂಟಿನೊಂದಿಗೆ ಆರಂಭವಾದ ಸಾಂಪ್ರದಾಯಿಕ ಕ್ರೀಡೆ ಕಂಬಳವನ್ನು ನಿಷೇಧಿಸುವ ಮೂಲಕ ಇಲ್ಲಿನ ಮಣ್ಣಿನ ಮೂಲ ಸತ್ವಕ್ಕೆ ಕೊಡಲಿ ಏಟು ಕೊಟ್ಟು ನಮ್ಮ ಸಂಸ್ಕೃತಿಗೆ ಧಕ್ಕೆ ತರಲು ಯತ್ನಿಸಿದವರ ವಿರುದ್ಧ ನಡೆದ ಪ್ರಬಲ ಹೋರಾಟದಲ್ಲಿ ಹುಟ್ಟಿಕೊಂಡ ಕಿಚ್ಚು ‘ಮಂಗಳೂರು ಕಂಬಳ’ವು 9 ನೇ ವರ್ಷಕ್ಕೆ ಹೆಜ್ಜೆಯನ್ನಿರಿಸಿದೆ.

ಕಂಬಳದ ಉದ್ಘಾಟನೆ : ಶನಿವಾರ, 27-12-2025 ಬೆಳಿಗ್ಗೆ ಘಂಟೆ 8.30
ಸಭಾ ಕಾರ್ಯಕ್ರಮ : ಶನಿವಾರ, 27-12-2025 ಸಂಜೆ ಘಂಟೆ 9.೦೦
ಬಹುಮಾನ ವಿತರಣೆ : ರವಿವಾರ, 28-12-2025 ಬೆಳಿಗ್ಗೆ ಘಂಟೆ 8.00
ಮಂಗಳೂರು ಕಂಬಳಕ್ಕೆ 9 ವರ್ಷ ಪೂರೈಸಿದ ಹಿನ್ನಲೆಯಲ್ಲಿ ನವ ವರುಷ ನವ ವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

1. ರಾಣಿ ಅಬ್ಬಕ್ಕ – ಚಾರಿತ್ರಿಕ ಚಿತ್ರಕಲಾ ಪ್ರದರ್ಶನ – ಪೋರ್ಚುಗೀಸರ ವಿರುದ್ಧ ದಿಟ್ಟತನದಿಂದ ಹೋರಾಟ ಮಾಡಿದ ತೌಳವ ಮಣ್ಣಿನ ಹೆಮ್ಮೆಯ ರಾಣಿ “ರಾಣಿ ಅಬ್ಬಕ್ಕ” ರವರ ಚಾರಿತ್ರಿಕ ಚಿತ್ರಕಲಾ ಪ್ರದರ್ಶನ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಪ್ರೊ. ತುಕರಾಮ ಪೂಜಾರಿಯವರ ಸಹಯೋಗದಿಂದ ನಡೆಯಲಿದೆ.
2.ವಂದೇ ಮಾತರಂ 150- ಸಾಮೂಹಿಕ ಗೀತ ಗಾಯನ – ಭಾರತ ಸ್ವಾತಂತ್ರದ ಧ್ಯೇಯ ಮಂತ್ರ ವಂದೇ ಮಾತರಂ ಗೀತೆಗೆ 150 ವರ್ಷ ಪೂರೈಸಿದ ಹಿನ್ನಲೆಯಲ್ಲಿ 15೦ ವಿದ್ಯಾರ್ಥಿನಿಯರಿಂದ ವಂದೇ ಮಾತರಂ ಸಾಮೂಹಿಕ ಗೀತ ಗಾಯನ.
3.ಮಂಗಳೂರು ಕಂಬಳ ಪ್ರಶಸ್ತಿ-3 ಉದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ‘ಬ್ಯಾಕ್ ಟು ಊರು’ ಪರಿಕಲ್ಪನೆಗೆ ಶಕ್ತಿ ತುಂಬುತ್ತಿರುವ 9 ಮಂದಿಗೆ ಮಂಗಳೂರು ಕಂಬಳ ಪ್ರಶಸ್ತಿ 2025 ನೀಡಿ ಗೌರವಿಸಲಾಗುವುದು.
4.ಏಕ್ ಪೇಡ್ ಮಾ ಕೆ ನಾಮ್ – ತಾಯಿಯ ಹೆಸರಿನಲ್ಲಿ ಒಂದು ಗಿಡ – ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನವ ಸಂಕಲ್ಪಗಳಲ್ಲಿ ಒಂದಾಗಿರುವ ‘ಏಕ್ ಪೇಡ್ ಮಾ ಕೆ ನಾಮ್ – ತಾಯಿಯ ಹೆಸರಿನಲ್ಲಿ ಒಂದು ಗಿಡ’ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.
5.ವಿಶೇಷ ಸಾಮರ್ಥ್ಯ ಹಾಗೂ ಓಲ್ಡ್ ಏಜ್ಡ್ ಹೋಮ್‌ನಲ್ಲಿ ನೆಲೆಸಿರುವ ಮಂಗಳೂರು ನಗರ ಪರಿಸರದ ನಿವಾಸಿಗಳನ್ನು ಕರೆತಂದು ಕಂಬಳ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುವುದು.
6.ರಂಗ್‌ದ ಕೂಟ – ಹೆಸರಿನಲ್ಲಿ ಚಿತ್ರಕಲಾ ಸ್ಪರ್ಧೆಯು ರಂಗ್‌ದ ಕಿನ್ಯ, ರಂಗ್‌ದ ಎಲ್ಯ, ರಂಗ್‌ದ ಮಲ್ಲ ಹಾಗೂ ರಂಗ್‌ದ ಕೂಟ ವಿಭಾಗಗಳಲ್ಲಿ ಬೆಳಿಗ್ಗೆ ಯಿಂದ ಮಧ್ಯಾಹ್ನ ತನಕ ನಡೆಯಲಿರುತ್ತದೆ.
7.ಮಂಗಳೂರು ಕಂಬಳ 2025 ರೀಲ್ಸ್ – ಮಂಗಳೂರು ಕಂಬಳದ ಕ್ಷಣಗಳನ್ನು ರೀಲ್ಸ್ ಮಾಡುವ ಮೂಲಕ ಅತೀ ಹೆಚ್ಚು ವೀಕ್ಷಣೆ ಪಡೆಯುವ ರೀಲ್ಸ್ಗೆ ಬಹುಮಾನವನ್ನು ನೀಡಲಾಗುವುದು.
8.ಮಂಗಳೂರು ಕಂಬಳ ಫೋಟೊಗ್ರಾಫಿ – ಫೋಟೋಗ್ರಾಫಿ ಸ್ಪರ್ಧೆ ಆಯೋಜನೆ ಮಾಡಲಾಗಿದ್ದು, ನುರಿತ ತೀರ್ಪುಗಾರರ ಮೂಲಕ ಆಯ್ಕೆಯಾದ ಚಿತ್ರಕ್ಕೆ ನಗದು ಬಹುಮಾನ ನೀಡಲಾಗುವುದು.
9.ಎಐ ಕ್ರಿಯೇಟಿವ್ ಎಡಿಷನ್ – ಕೃತಕ ಬುದ್ಧಿಮತ್ತೆ (ಎಐ) ಉಪಯೋಗಿಸಿ ಮಂಗಳೂರು ಕಂಬಳ ಕಲಾಕೃತಿಯ ರಚಿಸುವ ಸ್ಪರ್ಧೆ ನಡೆಯಲಿದ್ದು ಉತ್ತಮ ಕಲಾಕೃತಿಗೆ ಬಹುಮಾನ ನೀಡಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಸಂಸದ ಬ್ರಿಜೇಶ್ ಚೌಟ ಪ್ರಕಟಿಸಿದರು.
.

LEAVE A REPLY

Please enter your comment!
Please enter your name here