ಮೂಡುಬಿದಿರೆ : ನದಿಯಲ್ಲಿ ತೇಲುತ್ತಿದ್ದ ಯುವಕನ ಮೃತದೇಹ ಪತ್ತೆ

0
262

ಮೂಡುಬಿದಿರೆ: ಹೊಸಂಗಡಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನ ಮೃತದೇಹ ಬುಧವಾರ ಸಂಜೆ ನೆತ್ತೋಡಿ ಎಂಬಲ್ಲಿ ಸಂಜೆ ಪತ್ತೆಯಾಗಿದೆ.

ಕಾರ್ಕಳ ತಾಲೂಕು ಮಿಯ್ಯಾರು ಗ್ರಾಮದ ಲತೀಶ್ ಪೂಜಾರಿ (42) ಎಂಬಾತ ಆತ್ಮಹತ್ಯೆ ಮಾಡಿಕೊಂಡವರು.ಇವರಿಗೆ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ. ವಿದೇಶದಲ್ಲಿದ್ದ ಇವರು ಇತ್ತೀಚೆಗಷ್ಟೇ ಊರಿಗೆ ಬಂದಿದ್ದರು. ಇತ್ತೀಚೆಗೆ ಹೊಸಂಗಡಿಯಲ್ಲಿರುವ ಹೆಂಡತಿ ಮನೆಗೆ ಬಂದಿದ್ದರೆನ್ನಲಾಗಿದೆ.

ಭಾನುವಾರ ಅದ್ಯಾವುದೋ ವಿಷಯಕ್ಕೆ ಜಗಳ ನಡೆದಿತ್ತೆನ್ನಲಾಗಿದ್ದು , ಮಿಯ್ಯಾರಿನಲ್ಲಿರುವ ತನ್ನ ಅಣ್ಣನ ಮೊಬೈಲ್ ಗೆ ಮೆಸೇಜ್ ಮಾಡಿ ಈ ಬಗ್ಗೆ ಹೇಳಿಕೊಂಡಿದ್ದು,ಅವರು ‘ಸರಿಮಾಡುವ,ಆತುರದ ನಿರ್ಧಾರ ಬೇಡ’ಎಂದು ಬುದ್ಧಿಮಾತು ಹೇಳಿದ್ದರೆನ್ನಲಾಗಿದೆ. ಆದರೆ ಆತ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.

LEAVE A REPLY

Please enter your comment!
Please enter your name here