ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ತಿಂಗಳ ಸಂಭ್ರಮ ವಿಶೇಷ ಕಾರ್ಯಕ್ರಮ

0
64

ರಾಜ್ಯ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಡಿಸೆಂಬರ್ ತಿಂಗಳ ವಿಶೇಷ ಕಾರ್ಯಕ್ರಮ ತಿಂಗಳ ಸಂಭ್ರಮ ಕಾರ್ಯಕ್ರಮವು ಆದಿತ್ಯವಾರ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ ಜರಗಿತು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಮಾಜಿ ಕೋಶಾಧಿಕಾರಿ ಆರತಿ ಅಬ್ಬನಡ್ಕ ಹಾಗೂ ಮಾಜಿ ಮಹಿಳಾ ಸಂಘಟನಾ ಕಾರ್ಯದರ್ಶಿ ಪುಷ್ಪ ಕುಲಾಲ್ ಅವರು ಮನದಾಳದ ಮಾತು ಕಾರ್ಯಕ್ರಮದಲ್ಲಿ ಮಾತನಾಡಿದರು.

ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ನಿಕಟ ಪೂರ್ವಾಧ್ಯಕ್ಷರಾದ ದಿನೇಶ್ ಪೂಜಾರಿ ಬೀರೊಟ್ಟು, , ಕಾರ್ಯದರ್ಶಿ ಸತೀಶ್ ಅಬ್ಬನಡ್ಕ ಮಹಿಳಾ ಸಂಘಟನಾ ಕಾರ್ಯದರ್ಶಿ ಸುಲೋಚನಾ ಕೋಟ್ಯಾನ್ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತಿತರಿದ್ದರು.

LEAVE A REPLY

Please enter your comment!
Please enter your name here