ದಾವಣಗೆರೆ : ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕ್ಷೇತ್ರದ ಪ್ರಕಾಶಮಾನ ತಾರೆಗಳಲ್ಲಿ ಒಬ್ಬರಾದ ಶ್ರೀಯುತ ಅಶೋಕ್ ಹುಗ್ಗಣ್ಣನವರ್ ಇವರು ದಿನಾಂಕ 25 ಡಿಸೆಂಬರ್ 2025 ರಂದು ಬೆಳಗಿನ ಜಾವ 12.30 ಗಂಟೆಗೆ ನಮ್ಮನ್ನು ಅಗಲಿದ್ದಾರೆ ಎಂದು ತಿಳಿಸಲು ಅತೀವ ದುಃಖವೆನಿಸುತ್ತದೆ. ಅವರು ಹುಬ್ಬಳ್ಳಿ ತಾಲೂಕಿನ ಯರಗುಪ್ಪಿ ಗ್ರಾಮದವರು. ಇವರು ಬಾಲ್ಯದಿಂದಲೇ ಸಂಗೀತದ ಕಡೆಗೆ ಒಲವನ್ನು ಬೆಳೆಸಿಕೊಂಡಿದ್ದರು. ಹಾಗಾಗಿ ಚಿಕ್ಕಂದಿನಿಂದಲೇ ಸಂಗೀತ ಅಭ್ಯಾಸವನ್ನು ಪ್ರಾರಂಭಿಸಿದರು. ಇವರು ಬಿಎಸ್ಸಿ ಪದವೀಧರರು. ಇವರು ಸಂಗೀತ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆಯನ್ನು ಮಾಡಿ ಡಾಕ್ಟರೇಟ್ ಪದವಿಯನ್ನು ಕೂಡ ಪಡೆದುಕೊಂಡಿದ್ದರು. ಹೊನ್ನಾವರ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಂತರ ಸಂಗೀತ ವಿಭಾಗದ ಮುಖ್ಯಸ್ಥ ರಾಗಿ ಕಾರ್ಯನಿರ್ವಹಿಸಿದ್ದಾರೆ, ಅವರು ಅಲ್ಲಿ ಕೆಲಸ ಮಾಡುತ್ತಿದ್ದಾಗ ಬಹಳಷ್ಟು ಜನ ಶಿಷ್ಯರನ್ನು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತಯಾರು ಮಾಡಿರುತ್ತಾರೆ. ಅವರ ಸಾಧನೆ ಅಪಾರ. ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ ಮತ್ತು ಅವರ ಕುಟುಂಬ ವರ್ಗದವರಿಗೆ ಶಿಷ್ಯ ವೃಂದಕ್ಕೆ ಆತ್ಮೀಯರಿಗೆ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಕರ್ನಾಟಕ ಸುಗಮ ಸಂಗೀತ ಪರಿಷತ್ತು ದಾವಣಗೆರೆ ತಾಲ್ಲೂಕು ಅಧ್ಯಕ್ಷರು, ಹಿಂದೂಸ್ತಾನಿ ಸಂಗೀತಗಾರರಾದ ಮಾಲತೇಶ ಕುಲಕರ್ಣಿ, ದಾವಣಗೆರೆ ಜಿಲ್ಲೆಯ ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ಪರಿಷತ್ತಿನ ಸರ್ವ ಸದಸ್ಯರು, ಪದಾಧಿಕಾರಿಗಳು ದಾವಣಗೆರೆಯ ಶ್ರೀ ರಾಮ್ ಭಜನಾ ಮಂಡಳಿಯವರು ನುಡಿ ನಮನದೊಂದಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
Home Uncategorized ಸ್ವರ್ಗಸ್ಥರಾದ ಖ್ಯಾತ ಸಂಗೀತಗಾರರಾದ ಡಾ. ಅಶೋಕ್ ಹುಗ್ಗಣ್ಣನವರಿಗೆ ಕರ್ನಾಟಕ ಸುಗಮ ಸಂಗೀತ ಪರಿಷತ್ತಿನಿಂದ ಶ್ರದ್ಧಾಂಜಲಿ

