ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹತ್ಯಾಕಾಂಡ ಖಂಡಿಸಿ ಮನವಿ

0
49


ಉಡುಪಿ : ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹತ್ಯಾಕಾಂಡ ಖಂಡಿಸಿ ಇಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ವತಿಯಿಂದ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಇತ್ತೀಚೆಗೆ ಬಾಂಗ್ಲಾದೇಶದಲ್ಲಿ  ಹಿಂದೂ ಸಮುದಾಯದ  ನಡೆಯುತ್ತಿರುವ ಬರ್ಬರ ಹತ್ಯೆಗಳು ಹಾಗೂ ಅಮಾನುಷ ದೌರ್ಜನ್ಯಗಳನ್ನು ತಾವು ಖಂಡಿಸುವುದಾಗಿ ತಿಳಿಸಿದ ಸಮಿತಿಯ ಪದಾಧಿಕಾರಿಗಳು ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಬಾಂಗ್ಲಾದೇಶದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಿಂದೂಗಳ ಹತ್ಯೆ, ದೇವಾಲಯಗಳ ಧ್ವಂಸ ಹಾಗೂ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಂಭೀರವಾಗಿ ಪರಿಗಣಿಸಬೇಕು. ಭಾರತ ಸರ್ಕಾರವು ಅಗತ್ಯ ರಾಜತಾಂತ್ರಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು  ಒತ್ತಾಯಿಸಲಾಗಿದೆ.

ಹಾಗೇ, ಕರ್ನಾಟಕ ರಾಜ್ಯ ಸರ್ಕಾರವು ಜಾರಿಗೆ ತರಲು ಹೊರಟಿರುವ ದ್ವೇಷ ಭಾಷಣ ವಿಧೇಯಕವನ್ನು ತಕ್ಷಣವೇ ವಾಪಾಸ್ಸು ಪಡೆಯಬೇಕು ಎಂದು ಕೂಡಾ ಉಡುಪಿ ಜಿಲ್ಲಾಧಿಕಾರಿಗಳ ಮುಖೇನ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪ್ರಸ್ತಾವಿತ ದ್ವೇಷ ಭಾಷಣ ವಿಧೇಯಕವು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದ್ದು, ವಿಶೇಷವಾಗಿ ಹಿಂದೂ ಸಮಾಜದ ಧಾರ್ಮಿಕ ಆಚರಣೆಗಳು, ಧರ್ಮ ಪ್ರಚಾರ ಹಾಗೂ ಸತ್ಯವಚನಕ್ಕೆ ಅಡ್ಡಿಯಾಗುವಂತದ್ದಾಗಿದೆ. ಆದ್ದರಿಂದ ಈ ವಿಧೇಯಕವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಈ ಮೂಲಕ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಪ್ರಮುಖರಾದ ಶ್ರೀ ವಿಶ್ವನಾಥ ನಾಯಕ್ ಮತ್ತು ಧರ್ಮ ಪ್ರೇಮಿಗಳಾದ ಶ್ರೀನಿವಾಸ ಗಾಂವ್ಸ್ಕಾರ್, ಹರಿಪ್ರಸಾದ್ ನಾಯಕ್, ಪ್ರಕಾಶ್, ಮಲ್ಲೇಶ ಹಾಗೂ ಇತರ ಅನೇಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here