ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಕಾರ‍್ಯಕ್ರಮ

0
6


ಅಡ್ಯನಡ್ಕ: ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ಬಹುಮಾನ ವಿತರಣಾ ಸಮಾರಂಭವು ಡಿಸೆಂಬರ್ ೨೭ರಂದು ಜನತಾ ಪದವಿಪರ‍್ವ ಕಾಲೇಜಿನ ವಾರಣಾಶಿ ಕೃಷ್ಣ ಸಭಾಭವನದಲ್ಲಿ ಜರುಗಿತು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕೆನರಾ ಬ್ಯಾಂಕ್ ಮಣಿಪಾಲ ಇದರ ಜನರಲ್ ಮೇನೇಜರ್ ಹಾಗೂ ಸಂಸ್ಥೆಯ ಹಳೆ ವಿದ್ಯರ‍್ಥಿ ಕೆ. ರಾಮ ನಾಯ್ಕ್ ಅವರು ಪಾಲ್ಗೊಂಡು ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪರ‍್ಚನೆಗೈದು ಕರ‍್ಯಕ್ರಮ ಉದ್ಘಾಟಿಸಿದರು. ವಿದ್ಯರ‍್ಥಿಗಳು ಚೆನ್ನಾಗಿ ವಿದ್ಯರ‍್ಜನೆಗೈದು ಸಮಾಜದಲ್ಲಿ ಮುನ್ನೆಲೆಗೆ ಬಂದರೆ ಅದೇ ನಿಜವಾದ ಕೊಡುಗೆ ಎಂದು ನುಡಿದರು. ತಾವು ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ದಿನಗಳನ್ನು ನೆನಪಿಸಿಕೊಂಡು ಸಂಸ್ಥಾಪಕರನ್ನು ಅವರು ಸ್ಮರಿಸಿದರು.
ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನತಾ ವಿದ್ಯಾಸಂಸ್ಥೆಗಳ ಸಂಸ್ಥಾಪಕರಾದ ಸಾಯ ಕೃಷ್ಣ ಭಟ್ ಹಾಗೂ ವಾರಣಾಶಿ ಸುಬ್ರಾಯ ಭಟ್ ಅವರು ದೂರರ‍್ಶಿತ್ವ ಹೊಂದಿದ್ದರು. ಅವರಿಂದ ಸ್ಥಾಪನೆಯಾದ ಈ ವಿದ್ಯಾಸಂಸ್ಥೆ ಇಂದು ಖ್ಯಾತಿ ಪಡೆಯುತ್ತಿರುವುದು ಅಭಿಮಾನದ ವಿಷಯ ಎಂದು ಹೇಳಿದರು. ಜನತಾ ವಿದ್ಯಾಸಂಸ್ಥೆಗಳ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮರ‍್ತಿ ಅವರು ಸ್ವಾಗತಿಸಿ, ಪ್ರಸ್ತಾವನೆಗೈದರು. ಜನತಾ ಪದವಿಪರ‍್ವ ಕಾಲೇಜಿನ ರ‍್ಥಶಾಸ್ತ್ರ ಉಪನ್ಯಾಸಕಿ ವೀಣಾ ಟಿ. ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ರಾಮ ನಾಯ್ಕ್ ಕೆ., ಜನರಲ್ ಮೇನೇಜರ್, ಕೆನರಾ ಬ್ಯಾಂಕ್ ಅವರನ್ನು ಸನ್ಮಾನಿಸಲಾಯಿತು. ಜನತಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ ಎಂ. ಸನ್ಮಾನ ಪತ್ರ ವಾಚಿಸಿದರು.
ದತ್ತಿನಿಧಿಯ ವರದಿಯನ್ನು ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಟಿ. ಆರ್. ನಾಯ್ಕ್ ವಾಚಿಸಿದರು. ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ರಮೇಶ್ ಎಂ. ಬಾಯಾರು, ಆಡಳಿತ ಮಂಡಳಿಯ ಕೋಶಾಧಿಕಾರಿ ಕೇಶವ ಭಟ್ ಚರ‍್ಕಾಡು, ಹಿರಿಯ ವಿದ್ಯರ‍್ಥಿ ಸಂಘದ ಅಧ್ಯಕ್ಷ ಗಿರೀಶ್ ಮುಳಿಯಾಲ, ಜನತಾ ಪದವಿಪರ‍್ವ ಕಾಲೇಜಿನ ಪ್ರಾಂಶುಪಾಲ ರವಿಕುಮಾರ್ ಆರ್. ಎಸ್., ಜನತಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹರಿಣಾಕ್ಷಿ ಎ., ಜನತಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರಶಾಂತ ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರಾದ ದಿ| ವಾರಣಾಶಿ ಸುಬ್ರಾಯ ಭಟ್ ಹಾಗೂ ದಿ| ಸಾಯ ಕೃಷ್ಣ ಭಟ್ ಅವರ ಸ್ಮರಣರ‍್ಥ ಪ್ರತಿಭಾ ಪುರಸ್ಕಾರ, ವಿದ್ಯರ‍್ಥಿ ವೇತನ, ದತ್ತಿನಿಧಿ ಬಹುಮಾನಗಳು, ಸಾಂಸ್ಕೃತಿಕ ಸ್ರ‍್ಧೆಗಳು ಮತ್ತು ಕ್ರೀಡಾ ಸ್ರ‍್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು. ಮುಖ್ಯ ಅತಿಥಿಗಳು, ಆಡಳಿತ ಮಂಡಳಿಯ ಸದಸ್ಯರು, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರು ಉಪಸ್ಥಿತರಿದ್ದು ಬಹುಮಾನಗಳನ್ನು ವಿತರಿಸಿದರು. ಅಧ್ಯಾಪಕ ವೃಂದದ ಸುಗುಣ ರೈ, ಕುಸುಮಾವತಿ, ಅಪರ‍್ವ, ದಿವ್ಯ, ಮಂಜುಶ್ರೀ, ಗೀತಾಕುಮಾರಿ, ಸದಾನಂದ ರೈ ಅವರು ಬಹುಮಾನ ವಿಜೇತರ ವಿವರ ವಾಚಿಸಿದರು.
ದಿ| ಪರ‍್ವತಿ ಅಮ್ಮ ಹಾಗೂ ಅವರ ಮಗ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಿ| ನಾರಾಯಣ ಜೋಶಿ ಚರ‍್ಕಾಡು ಅವರ ಸ್ಮರಣರ‍್ಥ ಅವರ ಪತ್ನಿ ಸರೋಜಾ ನಾರಾಯಣ ಜೋಶಿ ಅವರಿಂದ ಸಿಹಿತಿಂಡಿ ವಿತರಣೆ ನಡೆಯಿತು. ಜನತಾ ಪದವಿಪರ‍್ವ ಕಾಲೇಜಿನ ವಿದ್ಯರ‍್ಥಿನಿಯರು ಸ್ಫರ‍್ತಿಗೀತೆ ಹಾಡಿದರು. ಜನತಾ ಪದವಿಪರ‍್ವ ಕಾಲೇಜಿನ ಕನ್ನಡ ಉಪನ್ಯಾಸಕ ಶೀನಪ್ಪ ನಾಯ್ಕ್ ಹಾಗೂ ಕನ್ನಡ ಅಧ್ಯಾಪಕ ಶಿವಕುಮಾರ್ ಸಾಯ ಕರ‍್ಯಕ್ರಮ ನಿರೂಪಿಸಿದರು. ಆಂಗ್ಲ ಭಾಷಾ ಉಪನ್ಯಾಸಕಿ ಜಯಶ್ರೀ ಕೆ. ಆರ್. ವಂದಿಸಿದರು.

LEAVE A REPLY

Please enter your comment!
Please enter your name here