ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಡಿ.29 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಗಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜನ ಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷರಾದ ಡಿ. ಅಬ್ದುಲ್ ರೆಹಮಾನ್ ಮಾತನಾಡಿ ಇಂದಿನ ಮಕ್ಕಳೇ ಮುಂದಿನ ಜನಾಂಗ, ದೇಶದ ಭವಿಷ್ಯ ಕಟ್ಟುವ ರೂವಾರಿಗಳು ವಿದ್ಯಾರ್ಥಿಗಳು ಹಾಗಾಗಿ ತಮ್ಮ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಸ್ವಾಸ್ಥ್ಯ ಸಂಕಲ್ಪದ ಪ್ರತಿಜ್ಞೆಯನ್ನು ಬೋಧಿಸಿದರು. ವೇದಿಕೆಯಲ್ಲಿ ಯೋಜನೆಯ ಬೆಳಾಲು ವಲಯದ ಒಕ್ಕೂಟದ ಅಧ್ಯಕ್ಷರಾದ ರತ್ನಾಕರ ಆಚಾರ್ಯ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿಗಳಾದ ತಾರಾನಾಥ್, ಚೈತನ್ಯ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಪ್ರಮೀಳಾ ಸ್ವಾಗತಿಸಿ, ಶಿಕ್ಷಕ ಕಿರಣ್ ವಂದಿಸಿದರು . ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಜಿರೆ ವಲಯ ಮೇಲ್ವಿಚಾರಕರಾದ ಪೂರ್ಣಿಮಾ ಕಾರ್ಯಕ್ರಮ ನಿರ್ವಹಿಸಿದರು.


