ಮೂಡುಬಿದಿರೆ: ಮೂಡುಬಿದಿರೆಯ ಮಾರೂರು ಹೊಸಂಗಡಿ ಎಂಬಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾಗಿ ಬಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಮೃತಪಟ್ಟ ಬಾಲಕ ಹೊಸಂಗಡಿ ನಿವಾಸಿ, ನಝೀರ್ ಎಂಬವರ ಪುತ್ರ ಝಾಹಿರ್ (13) ಎಂದು ತಿಳಿದು ಬಂದಿದೆ. ಈತ ಸ್ಥಳೀಯ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.ಬುಧವಾರ ಮಧ್ಯಾಹ್ನ ಝಾಹಿರ್ ತಾಯಿಯೊಂದಿಗೆ ಅಂಗಡಿಗೆಂದು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬಂದ ಕಾರು ನಿಯಂತ್ರಣ ತಪ್ಪಿ ಬಾಲಕನಿಗೆ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ.ಡಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

