ಬಂಟ್ವಾಳ ತಾಲೂಕು ನರಿಂಗಾನ ಪಂಚಾಯತ್ ನ ಮೊಂಟೆಪದವು ಕರ್ನಾಟಕ ಪಬ್ಲಿಕ್ ವಿದ್ಯಾಲಯದಲ್ಲಿ ಗ್ರಾಹಕ ಹಿತರಕ್ಷಣಾ ಮಾಹಿತಿಯನ್ನು ನೀಡಲಾಯಿತು. ಬೆಂಗಳೂರು ಸ್ಪಾರ್ಕ್ ಅಕಾಡೆಮಿಯ ತರಬೇತುದಾರ, ಸಂಪನ್ಮೂಲ ವ್ಯಕ್ತಿ, ದ.ಕ.ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ ರಾಯಿ ರಾಜ ಕುಮಾರರು ಮಾಹಿತಿದಾರರಾಗಿ ಆಗಮಿಸಿದ್ದರು.
ಅವರು ತಮ್ಮ ಭಾಷಣದಲ್ಲಿ ಮಾಹಿತಿ ಹಕ್ಕು ಕಾಯಿದೆ, ಗ್ರಾಹಕ ಹಿತ ರಕ್ಷಣಾ ಕಾಯಿದೆ, ಆಯ್ಕೆ, ಮಾಹಿತಿ, ಇತ್ಯಾದಿ ಹಕ್ಕುಗಳ ಮಾಹಿತಿಯನ್ನು ಹಲವಾರು ಉದಾಹರಣೆಗಳೊಂದಿಗೆ ನೀಡಿದರು. ವಸ್ತುಗಳ ಗುಣಮಟ್ಟ, ದಾಖಲೆ ಇಟ್ಟುಕೊಳ್ಳುವ ಅಗತ್ಯಗಳು, ಆಯೋಗಕ್ಕೆ ದೂರು ನೀಡುವ ವಿಧಾನಗಳ, ಪರಿಹಾರ ಪಡೆಯುವ ಕ್ರಮಗಳು ಬಗೆಗೂ ಮಾಹಿತಿಯನ್ನು ನೀಡಿದರು.
ವಿದ್ಯಾಸಂಸ್ಥೆಯ ಉಪ ಪ್ರಾಂಶುಪಾಲೆ ಡಾ. ಮಂಜುಳಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಶಿಕ್ಷಕಿ ಅನಿತಾಕ್ಷಿ ವೇದಿಕೆಯಲ್ಲಿ ಹಾಜರಿದ್ದರು. ಕ್ಲಬ್ ನ ಸಂಚಾಲಕಿ ಸಂಗೀತಾ ಸ್ವಾಗತಿಸಿದರು. ಹರಿಣಾಕ್ಷಿ ಕಾರ್ಯಕ್ರಮ ನಿರ್ವಹಿಸಿದರು. ಚಂದ್ರಿಕಾ ಧನ್ಯವಾದ ಸಲ್ಲಿಸಿದರು.
.

